ರೈತರ ಸಾಲದ ಬಡ್ಡಿ ಮನ್ನಾ-ಅಸಲು ಪಾವತಿಸಿದರೆ ಮಾತ್ರ ಸೌಲಭ್ಯ-ಸಹಕಾರಿ ಬ್ಯಾಂಕ್‌ಗಳಿಗೆ ಮಾತ್ರ ಅನ್ವಯ-ಸಿಎಂ ಸಿದ್ದರಾಮಯ್ಯ

ಮಂಗಳೂರು(ಬೆಳಗಾವಿ): ರೈತರು ಸಹಕಾರಿ ಬ್ಯಾಂಕುಗಳಿಂದ ಪಡೆದಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅಸಲನ್ನು ಸಕಾಲದಲ್ಲಿ ಪಾವತಿಸಿದವರಿಗೆ ಮಾತ್ರ ಈ ರಿಯಾಯಿತಿ ದೊರೆಯಲಿದೆ. ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಉಭಯ ಸದನಗಳಲ್ಲಿ ಉತ್ತರ ನೀಡಿದ ಅವರು ಈ ವಿಚಾರವನ್ನು ಡಿ.15ರಂದು ಪ್ರಕಟಿಸಿದರು.

‘ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವ ಭರವಸೆಯನ್ನು ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರಲಿಲ್ಲ. ಆದರೆ ಬರ ಮತ್ತು ರೈತರ ಸಂಕಷ್ಟದ ಕಾರಣದಿಂದ ಬಡ್ಡಿ ಮನ್ನಾ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದರು.

‘2018ರ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ಪ್ರಕಟಿಸಿದ್ದ ಪ್ರಣಾಳಿಕೆಯಲ್ಲಿ ₹1 ಲಕ್ಷದವರೆಗಿನ ಕೃಷಿ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿತ್ತು. ಯಡಿಯೂರಪ್ಪ ಮುಖ್ಯಮಂತ್ರಿ ಆದ ಬಳಿಕ ಕೃಷಿ ಸಾಲ ಮನ್ನಾ ಮಾಡಲಿಲ್ಲ. ವಿಧಾನಪರಿಷತ್‌ನಲ್ಲಿ ವಿ.ಎಸ್‌. ಉಗ್ರಪ್ಪ ಅವರು ಈ ವಿಷಯ ಪ್ರಸ್ತಾಪಿಸಿದಾಗ, ‘ನಾವು ನೋಟು ಪ್ರಿಂಟ್‌ ಮಾಡುವ ಯಂತ್ರ ಇಟ್ಟಿಲ್ಲ’ ಎಂದು ಯಡಿಯೂರಪ್ಪ ಉತ್ತರ ಕೊಟ್ಟಿದ್ದರು’ ಎಂದು ಸಿದ್ದರಾಮಯ್ಯ ಹೇಳಿದರು.

 

LEAVE A REPLY

Please enter your comment!
Please enter your name here