



ಮಂಗಳೂರು(ನವದೆಹಲಿ): ಸಂಸತ್ ಭವನದಲ್ಲಿ ನಡೆದಿದ್ದ ಭದ್ರತಾ ವೈಫಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿ ಮಹೇಶ್ ಕುಮಾವತ್‌ನನ್ನು ಡಿ.16ರಂದು ಪೊಲೀಸರು ಬಂಧಿಸಿದ್ದಾರೆ.







ಆರೋಪಿಯನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್‌ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಡಿ.14ರ ರಾತ್ರಿ ಲಲಿತ್ ಝಾ ಪೊಲೀಸರಿಗೆ ಶರಣಾಗಿದ್ದು, ಇದೇ ವೇಳೆ ಝಾ ಜೊತೆಗಿದ್ದ ಮಹೇಶ್ ಕುಮಾವತ್ ಎಂಬುವರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ರಾಜಸ್ಥಾನದಲ್ಲಿ ಝಾ ಅಡಗಿಕೊಳ್ಳಲು ಮಹೇಶ್ ನೆರವಾಗಿದ್ದರು ಎಂದು ಹೇಳಲಾಗಿದೆ. ವಿಚಾರಣೆಗೆ ಒಳಗಾಗಿರುವ ಮಹೇಶ್, ಸಂಸತ್ತಿನ ಭದ್ರತೆ ಉಲ್ಲಂಘಿಸಿದ ತಂಡದ ಜತೆ ಇರಬೇಕಿತ್ತು. ಆದರೆ, ಆತ ಅಂದು ಸ್ಥಳಕ್ಕೆ ಬರಲು ಸಾಧ್ಯವಾಗಿರಲಿಲ್ಲ ಎಂದು ಮೂಲಗಳು ತಿಳಿಸಿವೆ.















