ಮಂಗಳೂರು (ಬೆಂಗಳೂರು): ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ತಾರಕಕ್ಕೇರಿದ್ದು, ಬಂಡಾಯ ನಾಯಕ ಎಂದೇ ಬಿಂಬಿತವಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಹೈಕಮಾಂಡ್ ದೆಹಲಿಗೆ ಕರೆಸಿಕೊಂಡಿದೆ. ಉತ್ತರಕನ್ನಡದ ಸಂಸದ ಅನಂತಕುಮಾರ್ ಹೆಗಡೆ ಮತ್ತು ಕೊಪ್ಪಳ ಸಂಸದ ಸಂಗಣ್ಣ ಕರಡಿ ಯತ್ನಾಳ್ ಅವರೊಂದಿಗೆ ದೆಹೆಲಿಗೆ ತೆರಳಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.