



ಮಂಗಳೂರು (ಬೆಂಗಳೂರು): ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಯಾವಕಾಶ ನೀಡಿದ್ದು, ಡಿ.19ರಂದು ಬೆಳಿಗ್ಗೆ ಉಭಯ ನಾಯಕರು ಭೇಟಿಯಾಗಲಿದ್ದಾರೆ. ಭೇಟಿ ವೇಳೆ ಬರ ಪರಿಹಾರ ಬಿಡುಗಡೆ, ನರೇಗಾ ಯೋಜನೆಯಡಿ ಮಾನವ ಸಂಪನ್ಮೂಲ ಹೆಚ್ಚಿಸುವುದು ಸೇರಿದಂತೆ ಹಲವು ವಿಚಾರವಾಗಿ ಮುಖ್ಯಮಂತ್ರಿ ಪ್ರಧಾನ ಮಂತ್ರಿಯವರಿಗೆ ಮನವಿ ಸಲ್ಲಿಸಲಿದ್ದಾರೆ.






















