ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಅಡ್ವಾಣಿ, ಜೋಶಿ ಆಗಮಿಸದಂತೆ ಮನವಿ

[td_smart_list_end]Advaņi joshi requested not to attend ram mandir opening ceremony

ಮಂಗಳೂರು (ಅಯೋಧ್ಯೆ): ರಾಮಮಂದಿರ ಚಳವಳಿಯ ಮುಂಚೂಣಿಯಲ್ಲಿದ್ದ ಬಿಜೆಪಿ ಮುತ್ಸದ್ಧಿಗಳಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿಯವರು ವಯಸ್ಸು ಮತ್ತು ಆರೋಗ್ಯಸಮಸ್ಯೆ ಹಿನ್ನೆಲೆಯಲ್ಲಿ ಮುಂದಿನ ತಿಂಗಳು ನಡೆಯುವ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಗೈರುಹಾಜರಾಗುವ ಎಲ್ಲ ಸಾಧ್ಯತೆಗಳಿವೆ ಎಂದು ಮಂದಿರ ಟ್ರಸ್ಟ್ ಬಹಿರಂಗಪಡಿಸಿದೆ.

“ಕುಟುಂಬದ ಅತ್ಯಂತ ಹಿರಿಯರಾಗಿರುವ ಇಬ್ಬರು ಮುಖಂಡರ ವಯಸ್ಸಿನ ಹಿನ್ನೆಲೆಯಲ್ಲಿ ಅವರು ಸಮಾರಂಭಕ್ಕೆ ಆಗಮಿಸದಂತೆ ಮನವಿ ಮಾಡಿಕೊಳ್ಳಲಾಗಿದ್ದು, ಇದಕ್ಕೆ ಇಬ್ಬರೂ ಒಪ್ಪಿಕೊಂಡಿದ್ದಾರೆ” ಎಂದು ರಾಮಮಂದಿರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಅಡ್ವಾಣಿಗೆ 96 ವರ್ಷ ವಯಸ್ಸಾಗಿದ್ದು, ಮುರಳಿ ಮನೋಹರ ಜೋಶಿಯವರು ಮುಂದಿನ ತಿಂಗಳು 90ಕ್ಕೆ ಕಾಲಿಡಲಿದ್ದಾರೆ. ಜನವರಿ 22ರಂದು ನಡೆಯುವ ಪ್ರತಿಷ್ಠೆ ಕಾರ್ಯಕ್ಕೆ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಇದರಲ್ಲಿ ಭಾಗವಹಿಸುತ್ತಿದ್ದಾರೆ ಎಂದು ರಾಯ್ ಸ್ಪಷ್ಟಪಡಿಸಿದರು. ಜನವರಿ 15ರ ವೇಳೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಳ್ಳಲಿದ್ದು, ಪ್ರಾಣ ಪ್ರತಿಷ್ಠೆಯ ಪೂಜಾ ವಿಧಿವಿಧಾನಗಳು ಜನವರಿ 16ರಂದು ಆರಂಭವಾಗಿ 22ರವರೆಗೂ ಮುಂದುವರಿಯಲಿವೆ ಎಂದು ಅವರು ತಿಳಿಸಿದ್ದಾರೆ.

ಇನ್ನು ಅಯೋಧ್ಯೆಯ ರಾಮಮಂದಿರದ ಲೋಕಾರ್ಪಣೆಗೆ ಹಿರಿಯ ರಾಜಕಾರಣಿ, ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರಿಗೆ ಆಹ್ವಾನ ನೀಡಲಾಗಿದೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಆಹ್ವಾನಿಸಲು ಟ್ರಸ್ಟ್‌ನ ಮೂವರು ಸದಸ್ಯರ ನಿಯೋಗವನ್ನು ಕಳುಹಿಸಲಾಗುತ್ತದೆ ಎಂದು ಎಂದು ರಾಮಮಂದಿರ ಟ್ರಸ್ಟ್‌ ತಿಳಿಸಿದೆ. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರಿಗೂ 90 ವರ್ಷ ವಯಸ್ಸಾಗಿದ್ದು, ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರಾ ಅನ್ನೋದನ್ನು ಕಾದು ನೋಡಬೇಕಿದೆ.

LEAVE A REPLY

Please enter your comment!
Please enter your name here