ಕೋವಿಡ್: ಕೇರಳ ಗಡಿಯಲ್ಲಿ ತಪಾಸಣೆ ಆರಂಭ

ಮಂಗಳೂರು (ವಿರಾಜಪೇಟೆ): ನೆರೆಯ ಕೇರಳದಲ್ಲಿ ಕೋವಿಡ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿರುವುದರಿಂದ ಗಡಿ ಪ್ರದೇಶವಾದ ಪೆರುಂಬಾಡಿ ಚೆಕ್‌ಪೋಸ್ಟ್‌ನಲ್ಲಿ ಡಿ.18ರಿಂದ ಪ್ರಯಾಣಿಕರ ಆರೋಗ್ಯ ತಪಾಸಣೆ ಆರಂಭಿಸಲಾಗಿದೆ. ಕೇರಳದಿಂದ ಬರುವ ಖಾಸಗಿ ವಾಹನಗಳನ್ನು ತಡೆದು ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

ಆರೋಗ್ಯ ನಿರೀಕ್ಷಣಾಧಿಕಾರಿ ಚಿರಂಜೀವಿ ಪ್ರತಿಕ್ರಿಯಿಸಿ, ‘ಇಲಾಖೆಯ ಸೂಚನೆಯಂತೆ ತಪಾಸಣೆ ನಡೆಸಲಾಗುತ್ತಿದೆ. ಸೋಂಕಿನ ಲಕ್ಷಣ ಕಂಡುಬಂದಲ್ಲಿ ಅವರಿಗೆ ವಿರಾಜಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ನಂತರ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ವತ್ರೆಗೆ ಕಳಿಸಲಾಗುತ್ತದೆ. ಇಲ್ಲಿಯವರೆಗೆ ನಡೆದ ತಪಾಸಣೆಯ ಸಂದರ್ಭ ಯಾರಿಗೂ ಸೋಂಕಿನ ಲಕ್ಷಣ ಕಂಡುಬಂದಿಲ್ಲ’ ಎಂದು ಮಾಹಿತಿ ನೀಡಿದರು.

ಮಾಣಿ- ಮೈಸೂರು ಹೆದ್ದಾರಿಯ ಸಂಪಾಜೆ ಚೆಕ್‌ ಪೋಸ್ಟ್ನಲ್ಲಿಯೂ ಪ್ರಯಾಣಿಕರ ಆರೋಗ್ಯ ತಪಾಸಣೆ ಆರಂಭಿಸಲಾಗಿದೆ.

LEAVE A REPLY

Please enter your comment!
Please enter your name here