ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಆಗ್ರಹಿಸಿ, ರೈತ ಕಾರ್ಮಿಕರ, ಜನಸಾಮಾನ್ಯರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಸಿಪಿಐ ಪಕ್ಷದ ವತಿಯಿಂದ ಜನಸಾಮಾನ್ಯರ ನಡಿಗೆ ಅಭಿವೃದ್ಧಿಯ ಕಡೆಗೆ “ಜಿಲ್ಲಾಧಿಕಾರಿ ಕಚೇರಿ ಚಲೋ” ಕಾಲ್ನಡಿಗೆ ಜಾಥಾ ನಡೆಯಿತು. ಮಂಗಳೂರಿನ ಅಂಬೇಡ್ಕರ್ ವೃತ್ತದಿಂದ ಆಡಳಿತ ಸೌಧದ ವರೆಗೆ ಕಾಲ್ನಡಿಗೆ ಜಾಥಾ ನಡೆಸಲಾಯಿತು.
ಜಾಥಾದಲ್ಲಿ ಡಿವೈಎಫ್ ಐ ರಾಜ್ಯಧ್ಯಕ್ಷ ಮುನೀರ್ ಕಾಟಿಪಳ್ಳ ಸೇರಿದಂತೆ ಯಾದವ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ವಸಂತ್ ಆಚಾರಿ, ಜಯಂತಿ ಶೆಟ್ಟಿ, ಮತ್ತಿತರರು ಭಾಗವಹಿಸಿದ್ದರು.