ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ-ಎರಡು ಮೂರು ದಿನದಲ್ಲಿ ಹೈಕಮಾಂಡ್ ನಾಯಕರು ತೀರ್ಮಾನ- ಸಿಎಂ

ಮಂಗಳೂರು(ನವದೆಹಲಿ): ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಸಂಬಂಧ ವರದಿ ಪಡೆದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಪಟ್ಟಿ ಪರಿಶೀಲನೆ ಮಾಡಿ ಎರಡು ಮೂರು ದಿನದಲ್ಲಿ ತಮ್ಮ ಅಭಿಪ್ರಾಯ ತಿಳಿಸುವುದಾಗಿ‌ ಹೇಳಿದ್ದಾರೆ ಎನ್ನಲಾಗಿದೆ.

ನಿಗಮ ಮಂಡಳಿ ಆಯ್ಕೆ ಸಂಬಂಧ ಡಿ.20ರಂದು ಎಐಸಿಸಿ ಕಚೇರಿಯಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ‌ ಮಲ್ಲಿಕಾರ್ಜುನ್ ಖರ್ಗೆ, ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಸಂಸದ ರಾಹುಲ್ ಗಾಂಧಿ , ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದರು. ಸಭೆಯಲ್ಲಿ ಕೆಲವು ಹಿರಿಯ ನಾಯಕರು ಮತ್ತು ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ ಅವಕಾಶ ನೀಡುವಂತೆ ರಾಹುಲ್‌ ಗಾಂಧಿ ಹಾಗೂ ಕೆ.ಸಿ ವೇಣುಗೋಪಾಲ್ ಸಲಹೆ ನೀಡಿದರು ಎನ್ನಲಾಗಿದೆ. ಈ ವಿಚಾರದಲ್ಲಿ ಒಮ್ಮತ ಮೂಡದ ಹಿನ್ನೆಲೆ ಈ ಬಗ್ಗೆ ನಿರ್ಧಾರ ಕೈಗೊಳ್ಳಲು ಸಮಯ ಬೇಕು ಎಂದು ಸಿಎಂಗೆ ಖರ್ಗೆ ತಿಳಿಸಿದ್ದಾರೆ ಎನ್ನಲಾಗಿದೆ. ಸಭೆಯ ಬಳಿಕ ಮಾತನಾಡಿದ ಸಿಎಂ , ನಾವು ಕಳುಹಿಸಿದ ಪಟ್ಟಿಯನ್ನು ವರಿಷ್ಠರು ಇನ್ನೂ ನೋಡಿಲ್ಲ. ನೋಡಿ ಪ್ರತಿಕ್ರಿಯಿಸುವುದಾಗಿ ತಿಳಿಸಿದ್ದಾರೆ. ಎರಡು ಮೂರು ದಿನದಲ್ಲಿ ಹೈಕಮಾಂಡ್ ನಾಯಕರು ಪ್ರತಿಕ್ರಿಯೆ ನೀಡಬಹುದು. ಆ ಬಳಿಕ ಪಟ್ಟಿ ಬಿಡುಗಡೆ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

 

LEAVE A REPLY

Please enter your comment!
Please enter your name here