ಮಂಗಳೂರು(ನವದೆಹಲಿ): ಹಿರಿಯ ವಾಗ್ಮಿ, ಚಿಂತಕ ಲಕ್ಷ್ಮೀಶ ತೋಳ್ಪಾಡಿ ಅವರು ಈ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ತೋಳ್ಪಾಡಿಯವರ ‘ಮಹಾಭಾರತ ಅನುಸಂಧಾನದ ಭಾರತ ಯಾತ್ರೆ’ ಕೃತಿಗೆ ಈ ಪುರಸ್ಕಾರ ಲಭಿಸಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ತಿಳಿಸಿದೆ. ಭಗವದ್ಗೀತೆಯ ಬಗೆಗಿನ ‘ಮಹಾಯುದ್ದಕ್ಕೆ ಮುನ್ನ’ ಮೊದಲ ಪ್ರಕಟಿತ ಕೃತಿ. ಅಂತರ್ಜಾಲ ಪತ್ರಿಕೆಯಲ್ಲಿ ಭಾಗವತದ ಬಗ್ಗೆ ಬರೆದ ಸರಣಿ ಬರಹಗಳ ಸಂಕಲನ ‘ಸಂಪಿಗೆ ಭಾಗವತ’, ‘ಬೆಟ್ಟ ಮಹಮದನ ಬಳಿಗೆ ಬಾರದಿದ್ದರೆ’, ‘ಭವ ತಲ್ಲಣ’ (ತಾಳಮದ್ದಲೆ ಕುರಿತು) ಮತ್ತಿತರ ಕೃತಿಗಳನ್ನು ರಚಿಸಿದ್ದಾರೆ.