ಸಂಸತ್‌ ದಾಳಿ ಪ್ರಕರಣ-ಪ್ರಶ್ನಿಸಿದ 143 ಸಂಸದರ ಅಮಾನತು-ಡಿ.22 ರಂದು ಜಂತರ್ ಮಂತರ್‌ನಲ್ಲಿ ವಿಪಕ್ಷ ಇಂಡಿಯಾ ಒಕ್ಕೂಟದಿಂದ ಪ್ರತಿಭಟನೆ

ಮಂಗಳೂರು(ನವದೆಹಲಿ): ಸಂಸದರನ್ನು ಅಮಾನತಿನಲ್ಲಿ ಇರಿಸಿರುವುದನ್ನು ಖಂಡಿಸಿ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ನಾಯಕರು ಡಿ.22ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲಿದ್ದು, ರಾಷ್ಟ್ರವ್ಯಾಪಿ ಪ್ರತಿಭಟನೆಗೂ ಕರೆ ನೀಡಿದೆ.

143 ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ಇಂದೂ ಕೂಡ ಪ್ರತಿಭಟನೆ ನಡೆಸಿದೆ. ವಿರೋಧ ಪಕ್ಷದ ಸಂಸದರು ಸಂಸತ್ ಭವನದಿಂದ ವಿಜಯ್ ಚೌಕ್‌ವರೆಗೆ ರ‍್ಯಾಲಿ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಬೇರೆ ಎಲ್ಲಿಯೋ ಮಾತನಾಡಿದ್ದಾರೆ. ಆದರೆ ಸಂಸತ್ತಿನಲ್ಲಿ ಪ್ರತಿಕ್ರಿಯೆ ನೀಡಿಲ್ಲ ಎಂದು ಟೀಕಿಸಿದ್ದಾರೆ. ಸಂಸತ್ ಭದ್ರತಾ ಉಲ್ಲಂಘನೆಯಂತಹ ಗಂಭೀರ ವಿಚಾರಗಳನ್ನು ನಾವು ಪ್ರಶ್ನೆ ಮಾಡಿದ್ದೇವೆ. ಪ್ರಧಾನಿ ಹಾಗೂ ಗೃಹ ಸಚಿವರು ಇದಕ್ಕೆ ಸಮಗ್ರ ವಿವರಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here