ಬೈಕ್‌ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಮೀನಿನ ಲಾರಿ-ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಮೀನಿನ ಲಾರಿ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ ಪಟ್ಟ ಘಟನೆ ಡಿ.21ರ ಮಧ್ಯಾಹ್ನ‌ ನಡೆದಿದೆ.

ಸುರತ್ಕಲ್ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್ ಮೃತಪಟ್ಟವರು. ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಬೈಕ್ ನಲ್ಲಿ ಸಾಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಮೀನು ಸಾಗಾಟದ ಲಾರಿ ಢಿಕ್ಕಿಯಾಗಿದೆ. ಪರಿಣಾಮ ರವೂಫ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.‌ ಮಂಗಳೂರು ನಗರ ದಕ್ಷಿಣ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here