ಭಾರತೀಯ ಕುಸ್ತಿ ಒಕ್ಕೂಟದ ಜಂಟಿ ಕಾರ್ಯದರ್ಶಿಯಾಗಿ ಪುತ್ತೂರಿನ ಬಿ.ಗುಣರಂಜನ್ ಶೆಟ್ಟಿ ಆಯ್ಕೆ

ಮಂಗಳೂರು: ಪ್ರತಿಷ್ಠಿತ ಭಾರತೀಯ ಕುಸ್ತಿ ಒಕ್ಕೂಟದ ಜಂಟಿ ಕಾರ್ಯದರ್ಶಿಯಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಭಾರತೀಯ ಕುಸ್ತಿ ಒಕ್ಕೂಟದ ಚುನಾವಣೆ ದೆಹಲಿಯಲ್ಲಿ ನಡೆದಿದ್ದು ಕುಸ್ತಿ ಒಕ್ಕೂಟದ ಜಂಟಿ ಕಾರ್ಯದರ್ಶಿಯಾಗಿ ಪುತ್ತೂರಿನ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.ಇವರು ನಡುಮೊಗರುಗುತ್ತು ವಿಠಲ ಶೆಟ್ಟಿ ಮತ್ತು ಬೆಳ್ಳಿಪ್ಪಾಡಿ ಉರಮಾಲುಗುತ್ತು ಪ್ರಫುಲ್ಲ ವಿ.ಶೆಟ್ಟಿ ದಂಪತಿಯ ಪುತ್ರ ಹಾಗೂ ಡಾ.ಸಾಯಿ ರಮೇಶ್ ಶೆಟ್ಟಿ ಮತ್ತು ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿಯವರ ಸಹೋದರ.ಇಂಜಿನಿಯರಿಂಗ್ ಪದವೀಧರರಾಗಿರುವ ಬಿ.ಗುಣರಂಜನ್ ಶೆಟ್ಟಿಯವರು ಬೆಂಗಳೂರುನಲ್ಲಿ ಉದ್ಯಮಿಯಾಗಿದ್ದಾರೆ.

LEAVE A REPLY

Please enter your comment!
Please enter your name here