ಮಂಗಳೂರು: ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಏರಿಕೆ ಕಾಣುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಇಬ್ಬರಲ್ಲಿ ಕೋವಿಡ್ ಸೋಂಕು ಇರುವುದು ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.
40 ವರ್ಷದ ಯುವಕನಲ್ಲಿ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದು, ವೆನ್ಲಾಕ್ ಆಸ್ಪತ್ರೆಯ ವೆಂಟಿಲೇಷನ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 83 ವರ್ಷ ಪ್ರಾಯದ ವ್ಯಕ್ತಿಯಲ್ಲಿ ಕೋವಿಡ್ ಸೋಂಕು ಇರುವುದು ಪತ್ತೆಯಾಗಿದೆ. ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೆ ಅಸ್ತಮಾ ಹಾಗೂ ಮಧುಮೇಹ ಕಾಯಿಲೆ ಇತ್ತು ಎಂದು ಡಿಎಚ್ ಒ ಡಾ. ತಿಮ್ಮಯ್ಯ ತಿಳಿಸಿದ್ದಾರೆ.