303 ಭಾರತೀಯರಿದ್ದ ವಿಮಾನ ಮಾರ್ಗ ಮಧ್ಯೆ ಭೂಸ್ಪರ್ಶ-ಮಾನವ ಕಳ್ಳಸಾಗಣೆ ಶಂಕೆಯಲ್ಲಿ ವಾಟ್ರಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

ಮಂಗಳೂರು(ಫ್ರಾನ್ಸ್‌): ನಿಕರಾಗುವಾಗೆ ತೆರಳುತ್ತಿದ್ದ ವಿಮಾನ ಡಿ.22ರಂದು ಮಾನವ ಕಳ್ಳಸಾಗಾಣೆ ಶಂಕೆ ಮೇರೆಗೆ ವಾಟ್ರಿ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿದೆ. ಈ ವಿಮಾನದಲ್ಲಿ ಸುಮಾರು 300 ಮಂದಿ ಭಾರತೀಯ ಪ್ರಯಾಣಿಕರಿದ್ದರು ಎನ್ನಲಾಗಿದೆ.

ವಿಮಾನವು ಯುಎಇಯಿಂದ ಹೊರಟಿದ್ದು, ರೊಮಾನಿಯಾದ ಲೆಜೆಂಡ್‌ ಏರ್‌ಲೈನ್ಸ್‌ಗೆ ಸೇರಿದ ಎ340 ವಿಮಾನವನ್ನು ಖಚಿತ ಮಾಹಿತಿ ಆಧರಿಸಿ ವಾಟ್ರಿ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ. ವಿಮಾನದಲ್ಲಿ ಇದ್ದವರು ಮಾನವ ಕಳ್ಳಸಾಗಣೆಗೆ ಒಳಗಾಗಿರುವ ಶಂಕೆ ಇದೆ ಎಂದು ಪ್ಯಾರಿಸ್‌ನ ಅಧಿಕಾರಿಗಳು ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಸಂಘಟಿತ ಅಪರಾಧ ನಿಗ್ರಹ ಘಟಕ ಜುನಾಲ್ಕೊ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿದೆ. ’ವಿಮಾನದಲ್ಲಿ 303 ಮಂದಿ ಭಾರತೀಯ ಪ್ರಜೆಗಳಿದ್ದಾರೆ. ಬಹುಶಃ ಇವರು ಯುಎಇಯಲ್ಲಿ ಕೆಲಸ ಮಾಡುತ್ತಿದ್ದಿರಬೇಕು. ಇವರನ್ನು ಅಮೆರಿಕ ಅಥವಾ ಕೆನಡಾಗೆ ಅಕ್ರಮವಾಗಿ ಪ್ರವೇಶಿಸುವ ಯತ್ನವಾಗಿ ತೆರಳುತ್ತಿದ್ದರು ಎಂದು ಶಂಕಿಸಲಾಗಿದೆ‘ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here