ಶ್ರೀ ರಾಮ ಮಂದಿರ ಹೆಸರಲ್ಲಿ ದೇಣಿಗೆ ಸಂಗ್ರಹ, ವಂಚಕರಿಂದ ದೂರ ಇರಿ-ದೇಣಿಗೆ ಸಂಗ್ರಹಿಸುತ್ತಿರುವುದು ಗಮನಕ್ಕೆ ಬಂದರೆ ತಕ್ಷಣವೇ ಪೊಲೀಸರಿಗೆ ದೂರು ನೀಡಿ – ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ಮಂಗಳೂರು(ನವದೆಹಲಿ): ರಾಮ ಮಂದಿರ ನಿರ್ಮಾಣದ ಕಾರ್ಯ ನಡೆಯುತ್ತಿದ್ದು, ಮಂದಿರದ ಹೆಸರಿನಲ್ಲಿ ವಂಚಕರು ದೇಣಿಗೆ ಸಂಗ್ರಹಿಸುತ್ತಿದ್ದಾರೆ. ರಾಮ ಮಂದಿರ ಟ್ರಸ್ಟ್, ವಿಶ್ವ ಹಿಂದೂ ಪರಿಷತ್ ಯಾವುದೇ ದೇಣಿಗೆ ಸಂಗ್ರಹಿಸುತ್ತಿಲ್ಲ. ಹೀಗಾಗಿ ಭಕ್ತರು ಎಚ್ಚರಿಕೆಯಿಂದರಲು ಸೂಚನೆ ನೀಡಲಾಗಿದೆ.

ದೇಣಿಗೆ ಸಂಗ್ರಹದ ಹೆಸರಿನಲ್ಲಿ ಮೋಸ ನಡೆಯುತ್ತಿರುವ ಕುರಿತು ಭಜರಂಗದಳ ಮಾಹಿತಿ ನೀಡಿದೆ. ಭಕ್ತರು ಎಚ್ಚರಿಕೆಯಿಂದ ಇರಬೇಕು. ಯಾರಾದರೂ ರಾಮ ಮಂದಿರ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುತ್ತಿರುವುದು ಗಮನಕ್ಕೆ ಬಂದರೆ ತಕ್ಷಣವೇ ಪೊಲೀಸರಿಗೆ ದೂರು ನೀಡಲು ವಿಶ್ವ ಹಿಂದೂ ಪರಿಷತ್ ಹೇಳಿದೆ. ಶ್ರೀರಾಮ ಪ್ರಾಣಪ್ರತಿಷ್ಠಾ ಸೇವಾ ಸಮಿತಿ, ರಾಮ ಮಂದಿರ ನಿರ್ಮಾಣ ಸಮಿತಿ, ರಾಮ ಮಂದಿರ ಜನ್ಮಭೂಮಿ ಸಮಿತಿ ಸೇರಿದಂತೆ ಹಲವು ಹೆಸರಿನಲ್ಲಿ ವಂಚನೆ ನಡೆಯುತ್ತಿದೆ. ರಶೀದಿ ಪ್ರಿಂಟ್ ಮಾಡಿಸಿ ಜನರಿಂದ ಲಕ್ಷ ಲಕ್ಷ ರೂಪಾಯಿ ವಂಚಿಸುವ ಕಾರ್ಯ ನಡೆಯುತ್ತಿದೆ ಅನ್ನೋ ಮಾಹಿತಿಯನ್ನು ಖುದ್ದು ವಿಶ್ವ ಹಿಂದೂ ಪರಿಷತ್ ಹೇಳಿದೆ. ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಈಗಾಗಲೇ ದೇಣಿಗೆ ಸಂಗ್ರಹಿಸಿ ಆಗಿದೆ. ಅಧಿಕೃತವಾಗಿ ಯಾವುದೇ ಸಮಿತಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿಲ್ಲ. ಹೀಗಾಗಿ ಯಾರೂ ಮೋಸ ಹೋಗಬಾರದು ಎಂದು ವಿಶ್ವಹಿಂದೂ ಪರಿಷತ್ ಹೇಳಿದೆ.

LEAVE A REPLY

Please enter your comment!
Please enter your name here