ರಾಜ್ಯ ಬಿಜೆಪಿಗೆ ನೂತನ ಪದಾಧಿಕಾರಿಗಳನ್ನು ನೇಮಿಸಿದ ಬಿ.ವೈ.ವಿಜಯೇಂದ್ರ

ಮಂಗಳೂರು(ಬೆಂಗಳೂರು): ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕವಾದ ಬಳಿಕ ಬಿ.ವೈ.ವಿಜಯೇಂದ್ರ ಪಕ್ಷದ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳು ಹಾಗೂ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ರಾಜ್ಯ ಉಪಾಧ್ಯಕ್ಷರುಗಳಾಗಿ ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ ನಾಯಕ್, ಎನ್.ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ಸಂತೋಷ್ ನಾಯಕ್, ಡಾ.ಬಸವರಾಜ ಕೇಲಗಾರ, ಮಾಳವಿಕಾ ಅವಿನಾಶ್, ಎಂ.ರಾಜೇಂದ್ರ ನೇಮಕವಾಗಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ವಿ.ಸುನೀಲ್ ಕುಮಾರ್, ಪಿ.ರಾಜೀವ್, ಎನ್.ಎಸ್.ನಂದೀಶ್ ರೆಡ್ಡಿ, ಜೆ.ಪ್ರೀತಮ್ ಗೌಡ ಆಯ್ಕೆ ಆಗಿದ್ದಾರೆ.

ರಾಜ್ಯ ಕಾರ್ಯದರ್ಶಿಗಳಾಗಿ ಶೈಲೇಂದ್ರ ಬೆಲ್ದಾಳೆ, ಡಿ.ಎಸ್.ಅರುಣ್, ಬಸವರಾಜ ಮತ್ತೀಮೋಡ್, ಸಿ.ಮುನಿರಾಜು, ವಿನಯ್ ಬಿದರೆ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಶರಣು ತಳ್ಳಿಕೇರಿ, ಲಲಿತಾ ಅನಾಪುರ, ಡಾ.ಲಕ್ಷ್ಮಿ ಅಶ್ವಿನ್ ಗೌಡ, ಅಂಬಿಕಾ ಹುಲಿನಾಯ್ಕರ್ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯ ಖಜಾಂಚಿಯಾಗಿ ಸುಬ್ಬ ನರಸಿಂಹ, ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ ಮಂಜುಳಾ, ಯುವ ಮೋರ್ಚಾ ಅಧ್ಯಕ್ಷ ಶಾಸಕ ಧೀರಜ್ ಮುನಿರಾಜು, ಎಸ್ ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತು, ಎಸ್ ಸಿ ಮೋರ್ಚಾ ಅಧ್ಯಕ್ಷ ಎಸ್.ಮಂಜುನಾಥ್(ಸಿಮೆಂಟ್ ಮಂಜು), ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ್ ನಡಹಳ್ಳಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ರಘು ಕೌಟಿಲ್ಯ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅನಿಲ್ ಥಾಮಸ್ ಅವರನ್ನು ನೇಮಕ ಮಾಡಲಾಗಿದೆ.

LEAVE A REPLY

Please enter your comment!
Please enter your name here