ಕೋಣೆಯೊಳಗೆ ಬಂಧಿಯಾದ ಮಗು- ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು- ನೆಮ್ಮದಿಯ ನಿಟ್ಟುಸಿರು ಬಿಟ್ಟ ಹೆತ್ತಮ್ಮ

ಮಂಗಳೂರು: ಕೋಣೆಯೊಳಗೆ ಬಾಕಿಯಾದ ಮಗುವನ್ನು ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ರಕ್ಷಣೆ ಮಾಡಿದ ಘಟನೆ ಮಂಗಳೂರಿನ ಕೊಡಿಯಾಲ್ ಗುತ್ತಿನ ಫ್ಲ್ಯಾಟ್‌ ವೊಂದರಲ್ಲಿ ಡಿ.25ರಂದು ನಡೆದಿದೆ.

ಸುಮಾರು 3 ವರ್ಷದ ಮಗು ಆಟವಾಡುತ್ತಾ ನಾಲ್ಕನೇ ಮಹಡಿಯ ಫ್ಲ್ಯಾಟ್‌ ನ ಕೋಣೆಯ ಬಾಗಿಲಿನ ಚಿಲಕವನ್ನು ಹಾಕಿಕೊಂಡಿದೆ. ಗಾಬರಿಗೊಂಡ ಪೋಷಕರು ಎಷ್ಟೇ ಪ್ರಯತ್ನಿಸಿದರು ಬಾಗಿಲು ತೆಗೆಯಲು ಸಾಧ್ಯವಾಗಿರಲಿಲ್ಲ. ಬಳಿಕ ಪಾಂಡೇಶ್ವರ ಠಾಣೆಯ ಅಗ್ನಿಶಾಮಕ ಅಧಿಕಾರಿ ರಾಜಾ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಹಗ್ಗದ ಮೂಲಕ 4ನೇ ಮಹಡಿಯಿಂದ ಮೇಲಿನಿಂದ ಮಗುವಿದ್ದ ಕೋಣೆಯ ಒಳಗೆ ತೆರಳಿ ಮಗುವನ್ನು ರಕ್ಷಣೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here