ಮಂಗಳೂರು ಟು ಗೋವಾ ವಂದೇ ಭಾರತ್‌ ರೈಲು-ಇಂದಿನಿಂದ ಪ್ರಾಯೋಗಿಕ ಸಂಚಾರ-ಡಿ.30ರಂದು ಪ್ರಧಾನಿ ಮೋದಿಯಿಂದ ಅಧಿಕೃತವಾಗಿ ಚಾಲನೆ

ಮಂಗಳೂರು: ಮಂಗಳೂರು ಗೋವಾ ನಡುವೆ ಸಂಚರಿಸಲಿರುವ ವಂದೇ ಭಾರತ್‌ ರೈಲಿಗೆ ಡಿ.30ರಂದು ಪ್ರಧಾನಿ ಮೋದಿ ಚಾಲನೆ ನೀಡಲಿದ್ದು ದಿನಗಣನೆ ಆರಂಭಗೊಂಡಿದೆ.

ವಂದೇ ಭಾರತ್‌ ರೈಲು ಮಂಗಳೂರಿಗೆ ಆಗಮಿಸಿದ್ದು, ಇಂದಿನಿಂದ (ಡಿ.26) ಪ್ರಾಯೋಗಿಕ ಸಂಚಾರ ಆರಂಭಿಸಿದ್ದು, ಬಹುನಿರೀಕ್ಷೆಯ ಬೇಡಿಕೆಗೆ ಮನ್ನಣೆ ಸಿಕ್ಕಿದಂತಾಗಿದೆ. ಡಿ.30 ರಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್‌ ಮೂಲಕ ಮಂಗಳೂರು ಗೋವಾ ಸೇರಿದಂತೆ ದೇಶದ 6 ಕಡೆಗಳಲ್ಲಿ ವಂದೇ ಭಾರತ್‌ ಮತ್ತು 2 ಕಡೆಗಳಲ್ಲಿ ಅಮೃತ್‌ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ನಿರ್ಮಾಣಗೊಂಡ 4 ಮತ್ತು 5ನೇ ಫ್ಲಾಟ್‌ಫಾರ್ಮ್‌ ಉದ್ಘಾಟನೆಗೊಳ್ಳಲಿದೆ. ಇಂದು ಮಂಗಳೂರು ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದ ನಳಿನ್‌ ಕುಮಾರ್‌ ಕಟೀಲ್‌ ವಂದೇ‌ ಭಾರತ್ ರೈಲಿನ ಪ್ರಾಯೋಗಿಕ ಸಂಚಾರದ ಪರಿಶೀಲನೆ ನಡೆಸಿದರು. ಈ ವೇಳೆ ರೈಲ್ವೇ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here