ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ-ಭಯೋತ್ಪಾದಕ ಕೃತ್ಯ ಇರಬಹುದು ಎಂದ ಇಸ್ರೇಲ್-ಉನ್ನತ ಮಟ್ಟದ ತನಿಖೆ

ಮಂಗಳೂರು(ದೆಹೆಲಿ): ದೆಹಲಿಯಲ್ಲಿರುವ ಇಸ್ರೇಲ್‌ನ ರಾಯಭಾರ ಕಚೇರಿ ಬಳಿ ಡಿ.26ರ ಸಂಜೆ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಹಾನಿ ಮತ್ತು ಯಾರಿಗೂ ಗಾಯಗಳಾಗಿಲ್ಲ. ವಿಧಿವಿಜ್ಞಾನ ತಜ್ಞರು ಸ್ಥಳದಲ್ಲಿ ಶೋಧ ನಡೆಸಿದ್ದು, ಸ್ಫೋಟದ ಅವಶೇಷ ಪತ್ತೆಯಾಗಿದೆ. ದೆಹಲಿ ಪೊಲೀಸರ ವಿಶೇಷ ಘಟಕ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆಯ ತನಿಖಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಭಾರತದಲ್ಲಿ ಇಸ್ರೇಲ್ ಪ್ರಜೆಗಳು ಎಚ್ಚರಿಕೆಯಿಂದ ಇರಬೇಕು ಎಂದು ಇಸ್ರೇಲ್‌ನ ನ್ಯಾಷನಲ್ ಸೆಕ್ಯೂರಿಟಿ ಕೌನ್ಸಿಲ್ ಸಲಹೆಗಳನ್ನು ನೀಡಿದ್ದು, ಇದೊಂದು ಭಯೋತ್ಪಾದಕ ಕೃತ್ಯ ಇರಬಹುದು ಎಂದು ಶಂಕೆ ವ್ಯಕ್ತಪಡಿಸಿದೆ. ಮಾರುಕಟ್ಟೆಗಳಿಗೆ, ಮಾಲ್‌ಗಳಿಗೆ ಹಾಗೂ ಜನದಟ್ಟಣೆ ಪ್ರದೇಶಗಳಿಗೆ ಹೋಗುವುದನ್ನು ಸದ್ಯ ನಿಲ್ಲಿಸಿ. ನಿಮ್ಮ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕುವುದನ್ನು ತ್ಯಜಿಸಿ. ಬಹಿರಂಗವಾಗಿ ಇಸ್ರೇಲ್‌ ಪ್ರತಿನಿಧಿಸುವ, ಚಿನ್ಹೆಗಳನ್ನು ತೋರಿಸುವ ಉಡುಗೆ–ತೊಡುಗೆ, ಧ್ವಜಗಳನ್ನು ಬಳಸಬೇಡಿ ಎಂದು ಸಲಹೆಗಳನ್ನು ನೀಡಿದೆ. ಅಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲು, ಭಾರತ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.

 

LEAVE A REPLY

Please enter your comment!
Please enter your name here