ಮಂಗಳೂರು(ಚಿಕ್ಕಬಳ್ಳಾಪುರ): ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮುಲ್ಲ ಸರ್ಕಾರಿ ಪ್ರೌಢ ಶಾಲೆಯ ಶೈಕ್ಷಣಿಕ ಅಧ್ಯಯನ ಪ್ರವಾಸದ ವೇಳೆ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ಅಪ್ರಾಪ್ತ ಶಾಲಾ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಆತನೊಂದಿಗೆ ರೊಮ್ಯಾಟಿಕ್ ಆಗಿ ವಿಡಿಯೋ ಹಾಗೂ ಚಿತ್ರಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿರುವ ಘಟನೆ ನಡೆದಿದೆ.
ಘಟನೆ ನಡೆದು ಬಹುದಿನಗಳ ನಂತರ ಪೋಟೋಗಳು ಸೋರಿಕೆಯಾಗಿದ್ದು ವಿದ್ಯಾರ್ಥಿ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯ ಮುಖ್ಯ ಶಿಕ್ಷಕಿ ಪುಪ್ಪಲತಾ ತಾನೊಬ್ಬ ಗುರು ಎಂಬುದನ್ನು ಮರೆತು ಶಾಲೆಯ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಬಾಲಕನೊಂದಿಗೆ ವಿವಿಧ ಭಂಗಿಗಳಲ್ಲಿ ಪೋಟೋ ತೆಗೆಸಿಕೊಂಡಿದ್ದಾರೆ. ವಿದ್ಯಾರ್ಥಿ ಕೂಡ ಶಿಕ್ಷಕಿಯನ್ನು ಮುದ್ದಾಡಿದ್ದು, ಕಿಸ್ ಕೊಟ್ಟಿರುವ ಫೋಟೋಗಳು ಈಗ ಎಲ್ಲೆಡೆ ವೈರಲ್ ಆಗಿದೆ. ಶಿಕ್ಷಕಿಯ ವರ್ತನೆ ಬಗ್ಗೆ ಪೋಷಕರು ಕಿಡಿಕಾರಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿ ಪೋಷಕರು ಕೂಡ ಶಾಲೆ ಬಳಿ ತೆರಳಿ ಶಿಕ್ಷಕಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯ ಬಗ್ಗೆ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಗಮನಕ್ಕೆ ತಂದಿದ್ದಾರೆ.