ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಕಾಸರಗೋಡು ವರ್ಕಾಡಿ ಮೂಲದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

ಮಂಗಳೂರು(ಸುಳ್ಯ): ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಕಾಸರಗೋಡು ವರ್ಕಾಡಿ, ಧರ್ಮನಗರದ ಸಮೀರ್(26) ಮೃತಪಟ್ಟ ಯುವಕ.

ಸುಳ್ಯ, ಪಯಸ್ವಿನಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಿಶನ್ ಆಪ್ಟಿಕಲ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಸುಳ್ಯದಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸವಿದ್ದ ಸಮೀರ್ ಡಿ.31 ರಂದು ರಜೆ ಇದ್ದ ಹಿನ್ನಲೆಯಲ್ಲಿ ಬಟ್ಟೆ ತೊಳೆಯಲು ಮತ್ತು ಸ್ನಾನಕ್ಕೆಂದು ಇತರ ಇಬ್ಬರು ಯುವಕರ ಜೊತೆ ನದಿಗೆ ಬಂದಿದ್ದರು. ಈ ಸಂದರ್ಭ ಸಮೀರ್ ನೀರಿನಲ್ಲಿ ಮುಳುಗಿದ್ದಾರೆ. ಬಳಿಕ ಪೊಲೀಸ್, ಅಗ್ನಿಶಾಮಕ ದಳ, ಮುಳುಗು ತಜ್ಞರು ಶೋಧ ನಡೆಸಿ ಮೃತ ದೇಹವನ್ನು ಪತ್ತೆ ಹಚ್ಚಿ ಹೊರ ತೆಗೆದಿದ್ದಾರೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here