ಹೊಸ ವರ್ಷಾಚರಣೆಗೆ ಎಂಡಿಎಂಎ ಮಾದಕವಸ್ತು ದಂಧೆ-ಸಿಸಿಬಿ ಕಾರ್ಯಾಚರಣೆ, ಓರ್ವನ ಬಂಧನ

ಮಂಗಳೂರು: ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಆರೋಪಿಯನ್ನು ಉಳ್ಳಾಲದ ದರ್ಗಾರೋಡ್, ಬಸ್ತಿ ಪಡ್ಪು ಕ್ವಾರ್ಟಸ್ ನಿವಾಸಿ ಮಹಮ್ಮದ್ ರಮೀಜ್(33) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಒಟ್ಟು 5,11,000/- ರೂ ಮೌಲ್ಯದ ಸೊತ್ತು ವಶಕ್ಕೆ ಪಡೆಯಲಾಗಿದೆ. ಡಿ.30 ರಂದು ಮಂಗಳೂರು ನಗರದ ಉಳ್ಳಾಲ ತಾಲೂಕು ದೇರಳಕಟ್ಟೆಯ ಕೆ ಎಸ್ ಹೆಗ್ಡೆ ಆಸ್ಪತ್ರೆಯ ಎದುರು ಫೀಜಾ ಮಾಲ್ ಮೈದಾನದ ಬಳಿ ಒಬ್ಬ ವ್ಯಕ್ತಿ ಅಕ್ರಮವಾಗಿ ಎಂಡಿಎಂಎ ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಆರೋಪಿ ಬೆಂಗಳೂರಿನಿಂದ ಎಂಡಿಎಂಎ ಎಂಬ ಮಾದಕ ವಸ್ತುವನ್ನು ಖರೀದಿ ಮಾಡಿ ತಂದು ಉಳ್ಳಾಲ ಪರಿಸರದಲ್ಲಿ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದನು. ಆರೋಪಿತನಿಂದ 5 ಲಕ್ಷ ರೂ ಮೌಲ್ಯದ 100 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಮೇಲೆ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದರೋಡೆ, ದರೋಡೆಗೆ ಸಂಚು, ಕೊಲೆಯತ್ನ ಹಾಗೂ ಕೊಣಾಜೆ ಠಾಣೆಯಲ್ಲಿ ದರೋಡೆ ಮಾಡಿದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ.

LEAVE A REPLY

Please enter your comment!
Please enter your name here