ಮಂಗಳೂರು: ನೂತನ ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅವರು ಜ.1ರಂದು ಅಧಿಕಾರ ಸ್ವೀಕರಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಡ್ರಗ್ಸ್, ಕೋಮುವಾದ ಸಹಿತ ಕಾನೂನು ಬಾಹಿರ ಕೃತ್ಯಗಳನ್ನು ಸಹಿಸುವುದಿಲ್ಲ. ಸೈಬರ್ ಕ್ರೈಂ ಬಗ್ಗೆ ಯೂ ಹೆಚ್ಚಿನ ನಿಗಾ ವಹಿಸಲಾಗುವುದು ಎಂದು ತಿಳಿಸಿದ್ದಾರೆ. ದಕ್ಷಿಣಕನ್ನಡ ಎಸ್ ಪಿ ರಿಷ್ಯಂತ್ ಸಿ ಬಿ, ಉಡುಪಿ ಎಸ್ ಪಿ ಡಾ. ಅರುಣ್ ಕುಮಾರ್ ಉಪಸ್ಥಿರಿದ್ದರು. ಈ ಹಿಂದೆ ಡಿಐಜಿಯಾಗಿದ್ದ ಚಂದ್ರಗುಪ್ತ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.