ಮಾದಕ ವಸ್ತು ಮಾರಾಟಕ್ಕೆ ಪ್ರಯತ್ನ-ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮಾದಕ ವಸ್ತು ಎಂಡಿಎಂಎ ಯನ್ನು ಪಡೀಲ್ ರೈಲ್ವೆ ಬ್ರಿಜ್ ಬಳಿ ಸರಿಪಳ್ಳಕ್ಕೆ ಹೋಗುವ ದಾರಿಯಲ್ಲಿ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಖಚಿತ ಮಾಹಿತಿ ಪಡೆದ ಕಂಕನಾಡಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬಜಾಲ್ ನ ಅಶ್ಪಾಕ್ ಯಾನೆ ಜುಟ್ಟು ಅಶ್ಪಾಕ(27) ಮತ್ತು ಸುರತ್ಕಲ್ ಕಾಟಿಪಳ್ಳದ ಉಮರ್ ಫಾರೂಕ್ ಇರ್ಫಾನ್ (26) ಎಂದು ಗುರುತಿಸಲಾಗಿದೆ. ಬಂಧಿತರಿಂದ 19ಗ್ರಾಂ ಎಂಡಿಎಂಎ ಸಹಿತ ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಮೊಬೈಲ್ ಫೋನ್ ಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ 1,92,800 ಎಂದು ಅಂದಾಜಿಸಲಾಗಿದೆ. ಆರೋಪಿ ಜುಟ್ಟು ಅಶ್ಪಕ್ ಮೇಲೆ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಉಳ್ಳಾಲ, ಸುರತ್ಕಲ್, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ ದರೋಡೆ ಸುಲಿಗೆ ದೋಂಬಿಯಂತಹ ಒಟ್ಟು 12 ಪ್ರಕರಣಗಳು ದಾಖಲಾಗಿರುತ್ತವೆ. ಆರೋಪಿ ಉಮ್ಮರ್ ಫಾರೂಕ್ ಇರ್ಫಾನ್ ಮೇಲೆ ಮಂಗಳೂರು ದಕ್ಷಿಣ, ಮಂಗಳೂರು ಗ್ರಾಮಾಂತರ, ಉಳ್ಳಾಲ, ಮೂಡಬಿದ್ರೆ, ಬರ್ಕೆ, ಕೊಣಾಜೆ, ಸುರತ್ಕಲ್, ಕಾರ್ಕಳ, ಶಿರ್ವ, ಕಾರ್ಕಳ ಗ್ರಾಮಾಂತರ, ಮಂಗಳೂರು ಉತ್ತರ, ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಕೊಲೆಯತ್ನ, ದರೋಡೆ, ಸುಲಿಗೆ, ಸರಗಳ್ಳತನ, ದೊಂಬಿ, ವಾಹನ ಕಳ್ಳತನದಂತಹ ಒಟ್ಟು 25 ಪ್ರಕರಣಗಳು ದಾಖಲಾಗಿರುತ್ತವೆ.

LEAVE A REPLY

Please enter your comment!
Please enter your name here