ಇಂದಿನಿಂದ “ಯುವನಿಧಿ” ಯೋಜನೆ ಜಾರಿ-ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಅಧಿಕೃತ ಚಾಲನೆ

ಮಂಗಳೂರು: ಶಿವಮೊಗ್ಗದಲ್ಲಿ ಇಂದು(ಜ.12) ರಾಜ್ಯ ಸರಕಾರದ 5ನೇ ಗ್ಯಾರಂಟಿ ಯೋಜನೆ ಜಾರಿಗೆ ಬರಲಿದೆ. ಇಂದು ನಡೆಯುವ ಕಾರ್ಯಕ್ರಮದಲ್ಲಿ ” ಯುವನಿಧಿ ” ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ಸಿಗಲಿದ್ದು, ಲಕ್ಷಕ್ಕೂ ಹೆಚ್ಚು ಪದವೀಧರರು ಭಾಗವಹಿಸುವ ನಿರೀಕ್ಷೆ ಇದೆ.

ಪದವೀಧರರಿಗೆ ಮಾಸಿಕ 3 ಸಾವಿರ ಮತ್ತು ಡಿಪ್ಲೋಮ ಪದವಿ ಹೊಂದಿದವರಿಗೆ ಮಾಸಿಕ 1500 ಕೊಡುವ ಯೋಜನೆ ಇದಾಗಿದ್ದು, ರಾಜ್ಯದ ಸುಮಾರು ನಾಲ್ಕು ಲಕ್ಷ ನಿರುದ್ಯೋಗಿ ಪದವೀಧರರಿಗೆ ಲಾಭ ಸಿಗಲಿದೆ ಎಂದು ಸರಕಾರ ಹೇಳಿದೆ. ಇಂದು ಬೆಳಿಗ್ಗೆ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಯುವನಿಧಿ ಯೋಜನೆಗೆ ಚಾಲನೆ ಸಿಗಲಿದೆ.

LEAVE A REPLY

Please enter your comment!
Please enter your name here