‘ಯುವನಿಧಿ’ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಮಂಗಳೂರು(ಶಿವಮೊಗ್ಗ): ಇಲ್ಲಿನ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ರಾಜ್ಯದ ವಿವಿಧೆಡೆಯಿಂದ ಬಂದಿದ್ದ 15 ಮಂದಿ ಯುವ ಜನರಿಗೆ ಸಾಂಕೇತಿಕವಾಗಿ ನಿರುದ್ಯೋಗ ಭತ್ಯೆಯ ಚೆಕ್ ವಿತರಿಸಲಾಯಿತು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಶರಣ ಪ್ರಕಾಶ ಪಾಟೀಲ, ಮಧು ಬಂಗಾರಪ್ಪ, ಬಿ.ನಾಗೇಂದ್ರ, ಮಂಕಾಳ್ ವೈದ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಶರಣಪ್ರಕಾಶ ಪಾಟೀಲ, ಯುವನಿಧಿ ಅಡಿ ಈಗ 70 ಸಾವಿರ ವಿದ್ಯಾರ್ಥಿಗಳ ನೋಂದಣಿ ಆಗಿದೆ. ಇದರ ಲಾಭ ಪಡೆಯಿರಿ ಎಂದರು. ನಿರುದ್ಯೋಗಿಗಳಿಗೆ ಹಣ ಕೊಡುವುದು ಮಾತ್ರವಲ್ಲ. ಅಭ್ಯರ್ಥಿಗಳ ಇಷ್ಟದ ಕೆಲಸಕ್ಕೆ ತರಬೇತಿ ಕೊಡಿಸಲಾಗುವುದು. ನಿರುದ್ಯೋಗ ದೊಡ್ಡ ಸಮಸ್ಯೆ. ನಿರಾಶರಾಗಬೇಡಿ. ಹಣದ ಜೊತೆ ಕೌಶಲ್ಯ ಕೊಟ್ಟು ದೇಶ-ವಿದೇಶಗಳಲ್ಲಿ ಉದ್ಯೋಗಾವಕಾಶ ಕೊಡಿಸುವ ಕೆಲಸ ಮಾಡಲಿದ್ದೇವೆ. ಯುವಕರ ಭವಿಷ್ಯ ನಿರ್ಮಾಣ ಮಾಡಲಿದ್ದೇವೆ ಎಂದರು.

LEAVE A REPLY

Please enter your comment!
Please enter your name here