ಭಾರತದ ಅತೀ ಉದ್ದದ ಸಮುದ್ರ ಸೇತುವೆ ‘ಅಟಲ್ ಸೇತು‘ ದೇಶಕ್ಕೆ ಅರ್ಪಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಗಳೂರು(ಮುಂಬೈ): ಮುಂಬೈನಲ್ಲಿ 20 ಸಾವಿರ ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾದ ಭಾರತದ ಅತೀ ಉದ್ದದ ಸಮುದ್ರ ಸೇತುವೆಯಾದ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ‘ಅಟಲ್ ಸೇತು‘ ಅನ್ನು ಪ್ರಧಾನಿ ನರೇಂದ್ರ ಮೋದಿ ಜ.12ರಂದು ದೇಶಕ್ಕೆ ಸಮರ್ಪಿಸಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನ ಇಡಲಾಗಿರುವ ಸೇತುವೆ 21.8 ಕಿ.ಮೀ ಉದ್ದದ ಆರು ಪಥದ ಸೇತುವೆಯಾಗಿದ್ದು, 16.5 ಕಿಮೀ ಸಮುದ್ರದ ಮೇಲೆ ಹಾಗೂ 5.5 ಕಿಮೀ ಭೂಮಿಯ ಮೇಲೆ ನಿರ್ಮಿಸಲಾಗಿದೆ. ಈ ಸಂದರ್ಭದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ರಮೇಶ್ ಬೈಸ್, ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಉಪಸ್ಥಿತರಿದ್ದರು.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here