ಮಂಗಳೂರು(ಹಾಸನ): ಅರ್ಜುನನ ಸಾವಿಗೆ ಕಾರಣವಾಗಿದ್ದ ಸಾರ್ ಮಾರ್ಟಿನ್ ಹೆಸರಿನ ಕಾಡಾನೆಯನ್ನು ಜ.13ರಂದು ಸೆರೆ ಹಿಡಿದು ಲಾರಿಯಲ್ಲಿ ಮತ್ತಿಗೋಡು ಕ್ಯಾಂಪ್‌ಗೆ ಸಾಗಿಸಲಾಗಿದೆ.
ಹಾಸನ ಜಿಲ್ಲೆ ಆಲೂರು ತಾಲೂಕಿನ ಪಾಳ್ಯ ಮತ್ತು ಕೆ. ಹೊಸಕೋಟೆ ಹೋಬಳಿ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಭಯದ ವಾತಾವರಣ ಸೃಷ್ಟಿಸಿದ್ದ ಈ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಶನಿವಾರ ಸೆರೆ ಹಿಡಿದಿದ್ದಾರೆ.
ಬೇಲೂರು ತಾಲ್ಲೂಕು ಬಿಕ್ಕೋಡು ಗ್ರಾಮದಲ್ಲಿ ಜ.12ರಂದು ಕಾರ್ಯಾಚರಣೆ ಆರಂಭವಾಗಿತ್ತು. ಶನಿವಾರ ಬೆಳಗ್ಗೆ ಅರಣ್ಯ ಇಲಾಖೆ ಉಪ ನಿರ್ದೇಶಕ ಸೌರತ್‍ಕುಮಾರ್ ನೇತೃತ್ವದಲ್ಲಿ, ತಾಲೂಕಿನ ಪಾಳ್ಯ ಹೋಬಳಿ ನಲ್ಲೂರು ಹಾಗೂ ಮುದ್ದನಾಯ್ಕನಹಳ್ಳಿಪುರ ಗ್ರಾಮಕ್ಕೆ ಸೇರಿದ ಸಹರಾ ಎಸ್ಟೇಟ್‍ನಲ್ಲಿ ಕಾರ್ಯಾಚರಣೆ ನಡೆಸಲಾಯಿತು.ಕೊಡಗು ಜಿಲ್ಲೆಯ ದುಬಾರೆ ಹಾಗೂ ಮತ್ತಿಗೋಡಿನಿಂದ ಬಂದಿದ್ದ ಅಭಿಮನ್ಯು, ಸುಗ್ರೀವ, ಧನಂಜಯ, ಪ್ರಶಾಂತ, ಭೀಮಾ, ಹರ್ಷ, ಅಶ್ವಥ್ಥಾಮ ಮತ್ತು ಮಹೇಂದ್ರ ಸಾಕಾನೆಗಳು ಈ ಕಾಡಾನೆಯನ್ನು ಸೆರೆಹಿಡಿದಿವೆ.
ಎಸ್ಟೇಟ್‍ನಲ್ಲಿ ಕಾಡಾನೆ ಬೀಡು ಬಿಟ್ಟಿದ್ದರಿಂದ ಸ್ಥಳೀಯರುಎಂದೇ ಇದನ್ನು ಕರೆಯುತ್ತಿದ್ದರು.