ಮಂಗಳೂರು(ಹಾವೇರಿ): ಮಾರ್ಚ್‌ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದ್ದು, ಫೆಬ್ರವರಿ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಾವೇರಿಯ ನರಸಾಪುರ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ಬಾರಿ ಬೇಗನೇ ಬಜೆಟ್ ಮಂಡಿಸುತ್ತೇವೆ ಎಂದು ತಿಳಿಸಿದ್ದಾರೆ.
ಬರಗಾಲ ಎದುರಿಸುತ್ತಿರುವ ರೈತರಿಗೆ ತಾತ್ಕಾಲಿಕವಾಗಿ ರಾಜ್ಯ ಸರ್ಕಾರ ತಲಾ 2 ಸಾವಿರ ರೂಪಾಯಿ ಪರಿಹಾರ ನೀಡಿದೆ. ಕೇಂದ್ರ ಸರ್ಕಾರದಿಂದ ಪ್ಯಾಕೇಜ್ ದೊರೆತ ತಕ್ಷಣ ರೈತರಿಗೆ ಹೆಚ್ಚಿನ ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದರು. ಸರ್ಕಾರವು ಪ್ರಸ್ತುತ ನೀಡುತ್ತಿರುವ ಪರಿಹಾರವು ಸಾಕಾಗುವುದಿಲ್ಲ ಎಂದು ನನಗೆ ತಿಳಿದಿದೆ. ಆದರೆ ಇದುವರೆಗೂ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ. ಬಿಜೆಪಿ ನಾಯಕರು ಟೀಕೆ ಮಾಡುವ ಬದಲು ಹಣ ಬಿಡುಗಡೆ ಮಾಡಿಸಲಿ ಎಂದು ಹೇಳಿದ್ದಾರೆ.
https://x.com/CMofKarnataka/status/1746827600989983154?s=20
ಇದೇ ವೇಳೆ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ಯಾವುದೇ ಧರ್ಮದವರಾಗಲಿ ಕಾನೂನು ಕೈಗೆತ್ತಿಕೊಳ್ಳಲು ಬಿಡುವುದಿಲ್ಲ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಹೇಳಿದ್ದಾರೆ.