ಜಾತಿ ಆಧಾರಿತ ಬಹಿಷ್ಕಾರಕ್ಕೆ ಪ್ರೋತ್ಸಾಹ-ಪೇಜಾವರ ಶ್ರೀ, ಅಜಿತ್ ಹನುಮಕ್ಕನವರ್ ವಿರುದ್ಧ ದೂರು ದಾಖಲು

ಮಂಗಳೂರು(ಉಡುಪಿ): ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಮತ್ತು ಸುವರ್ಣ ನ್ಯೂಸ್ ವಾಹಿನಿ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಜಾತಿ ತಾರತಮ್ಯ ಮತ್ತು ಧಾರ್ಮಿಕ ಸ್ಥಳಗಳಲ್ಲಿ ಜಾತಿ ಆಧಾರಿತ ಬಹಿಷ್ಕಾರವನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿ ಜ.12ರಂದು ದಲಿತ ಸಂಘಟನೆಯೊಂದು ದೂರು ದಾಖಲಿಸಿದೆ.

ಸುವರ್ಣ ನ್ಯೂಸ್ ವಾಹಿನಿಯಲ್ಲಿ ನಡೆದ ರಾಮಮಂದಿರ ಉದ್ಘಾಟನೆ ಸಂವಾದ ಕಾರ್ಯಕ್ರಮದಲ್ಲಿ ಅಯೋಧ್ಯೆ ರಾಮ ಜನ್ಮಭೂಮಿ ಟ್ರಸ್ಟ್‌ ನ ಸದಸ್ಯರಾದ ಉಡುಪಿ ಪೇಜಾವರ ಸ್ವಾಮೀಜಿ ಅತಿಥಿಯಾಗಿ ಭಾಗವಹಿಸಿದ್ದರು. ಡಿಸೆಂಬರ್ 27, 2023 ರಂದು ಕಾರ್ಯಕ್ರಮ ಪ್ರಸಾರವಾಗಿತ್ತು. ಕಾರ್ಯಕ್ರಮದಲ್ಲಿ ಅಯೋಧ್ಯೆಯ ರಾಮಮಂದಿರದೊಳಗೆ ದಲಿತರಿಗೆ ಪೂಜೆ ಮಾಡಲು ಅವಕಾಶವಿದೆಯೇ ಎಂಬುದರ ಕುರಿತು ಚರ್ಚೆಯನ್ನು ನಡೆಸಲಾಗಿತ್ತು.

ಕಾರ್ಯಕ್ರಮದ ವೇಳೆ ದಲಿತ ಸಂಘಟನೆಯ ವಕ್ತಾರ ನಾಗರಾಜ್, ಅಯೋಧ್ಯೆ ರಾಮ ಮಂದಿರದಲ್ಲಿ ಪೂಜೆ ನಡೆಸುವುದರಿಂದ ದಲಿತರನ್ನು ಹೊರಗಿಟ್ಟಿರುವ ಆರೋಪದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಪೇಜಾವರ ಶ್ರೀ, “ದೇವಸ್ಥಾನದಲ್ಲಿ ಒಬ್ಬರೇ ಪೂಜೆ ಮಾಡುತ್ತಾರೆ, ಎಲ್ಲರೂ ಮಾಡಲಾಗುವುದಿಲ್ಲ. ಕಾಶಿ ದೇವಸ್ಥಾನದಲ್ಲಿ ಹೊರತುಪಡಿಸಿ; ಪೂಜೆಗೆ ನೇಮಕಗೊಂಡವರು ಮಾತ್ರ ಮಾಡುತ್ತಾರೆ. ದೇವಸ್ಥಾನದಲ್ಲಿ ಮಾತ್ರವಲ್ಲ, ಯಾವುದೇ ಕಚೇರಿ ಮತ್ತು ಸಂಸ್ಥೆಯಲ್ಲಿ ಕೂಡ. ಪ್ರತಿಯೊಬ್ಬರೂ ಆ ಹುದ್ದೆಯಲ್ಲಿ ಕುಳಿತುಕೊಳ್ಳಬಹುದು, ಹುದ್ದೆಗೆ ನೇಮಕಗೊಂಡವರಿಗೆ ಮಾತ್ರ ಅವಕಾಶವಿದೆ’ ಎಂದು ಹೇಳುವ ಮೂಲಕ ಸ್ವಾಮೀಜಿ ಮತ್ತು ನಿರೂಪಕ ಅಸ್ಪೃಶ್ಯತೆಯನ್ನು ಪ್ರತಿಪಾದಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಡಾ.ಬಿ ಆರ್‌ ಆಂಬೇಡ್ಕರ್‌ ದಂಡು ಸಂಘಟನೆಯ ಮುಖಂಡರು ಜ.12ರಂದು ದೂರು ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here