ಫೆ.11 ರಿಂದ ಫೆ.15ರವರೆಗೆ ಬೋಳೂರು ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಸಹಿತ ಬ್ರಹ್ಮಕಲಶೋತ್ಸವ

ಮಂಗಳೂರು: ನಗರದ ಬೋಳೂರು ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಫೆ.11 ರಿಂದ ಫೆ.15 ರವರೆಗೆ
ಬ್ರಹ್ಮಶ್ರೀ ಕೋಡಿಕಲ್ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಪುನರ್ ಪ್ರತಿಷ್ಠೆ ಸಹಿತ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದೇವಳದ ಆವರಣದಲ್ಲಿ ನಡೆಯಿತು.

ಗಣ್ಯರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾದ್ಯಕ್ಷ ನಾಡೋಜ ಡಾ.ಜಿ.ಶಂಕರ್ ಅವರು ಮಾತನಾಡಿ, ಬ್ರಹ್ಮಕಲಶೋತ್ಸವದ ಪ್ರಯುಕ್ತ ಪೆ.9ರಂದು ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನ ಮತ್ತು ಕೇಂದ್ರ ಮೈದಾನದಿಂದ ಏಕಕಾಲಕ್ಕೆ ಮಂಗಳೂರು ವಲಯ ಮತ್ತು ಕೇರಳ ವಲಯ ಎಂಬ 2 ವಿಭಾಗವನ್ನು ಮಾಡಿ ಹೊರೆಕಾಣಿಕೆ ಮೆರವಣಿಗೆ, ಸಮುದಾಯ ಭವನದ ಉದ್ಘಾಟನೆ ಮತ್ತು ಫೆ.11ರಿಂದ 15 ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅನ್ನಸಂತರ್ಪಣೆ ನಡೆಯಲಿದೆ ಎಲ್ಲರೂ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಕೇಳಿಕೊಂಡರು.
ಶಾನಕ ವೇದವ್ಯಾಸ್ ಕಾಮತ್ ಮಾತನಾಡಿ, ಬ್ರಹ್ಮಕಲಶೋತ್ಸವ ಸಂಭ್ರಮಕ್ಕೆ ನಾಡಿನೆಲ್ಲೆಡೆಯಿಂದ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಹೀಗಾಗಿ ಆಡಳಿತ ವ್ಯವಸ್ಥೆಯಿಂದ ಬೇಕಾದ ಎಲ್ಲಾ ಕ್ರಮಗಳ ಅನುಷ್ಠಾನಕ್ಕೆ ಶ್ರಮಿಸಲಾಗುವುದು ಎಂದರು.

ಸಮಿತಿಯ ಅಧ್ಯಕ್ಷ ಅನಿಲ್ ಕುಮಾರ್ ಕರ್ಕೇರ ಬೊಕ್ಕಪಟ್ಣ ಮಾತನಾಡಿ, ಕರಾವಳಿ ಜಿಲ್ಲೆಯ ಎಲ್ಲಾ ಪ್ರದೇಶಗಳಲ್ಲಿ ಬ್ರಹ್ಮಕಲಶೋತ್ಸವದ ರಥ ಸಂಚರಿಸಲಿದೆ. ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಸೌತಡ್ಕ ಗಣಪತಿ ದೇವಸ್ಥಾನ, ಪೊಳಲಿ ರಾಜರಾಜೇಶ್ವರಿ ದೇವಸ್ಥಾನ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ ಹೀಗೆ ಹಲವು ಕಡೆ ಸಂಚರಿಸಲಿದೆ ಎಂದರು.

ಪ್ರಧಾನ ಸಂಚಾಲಕ ಗೌತಮ್ ಸಾಲ್ಯಾನ್ ಮಾತನಾಡಿ, ದೇವಳದಲ್ಲಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಗರ್ಭಗುಡಿಯ ನವೀಕರಣ, ಮೇಲ್ಚಾವಣಿ, ತಾಮ್ರದ ಹೊದಿಕೆ, ಸುತ್ತು ಪೌಳಿಯ ನವೀಕರಣ ನಡೆದಿದೆ. ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಸಭಾಭವನ ಉದ್ಘಾಟನೆ ಫೆ.3 ರಂದು ನಡೆಯಲಿದೆ. ಫೆ.11ರಿಂದ 15 ರವರೆಗೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮ, ಹಾಗೂ ಫೆ.26 ಮತ್ತು ಫೆ.27ರಂದು ವರ್ಷಾವಧಿ ಮಹಾಪೂಜೆ ನಡೆಯಲಿದೆ ಎಲ್ಲರೂ ಆಗಮಿಸಿ ದೇವರ ಆಶೀರ್ವಾದ ಪಡೆಯಿರಿ ಎಂದರು.

ಈ ಸಂದರ್ಭ ಬ್ರಹ್ಮಶ್ರೀ ಕೋಡಿಕಲ್ ಸುಬ್ರಹ್ಮಣ್ಯ ತಂತ್ರಿ, ಪ್ರಧಾನ ಕರ್ಯದರ್ಶಿ ಜಗದೀಶ್ ಬಂಗೇರ ಬೋಳೂರು, ಉಪಾಧ್ಯಕ್ಷ ಕುಮಾರ್ ಮೆಂಡನ್ ಬೈಕಂಪಾಡಿ, ಕೋಶಾಧಿಕಾರಿ ವಸಂತ್ ಅಮೀನ್ ಬೈಕಂಪಾಡಿ, 7 ಪಟ್ಣ ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷ ಲೋಕೇಶ್ ಸುವರ್ಣ, ಆಡಳಿತ ಮೊಕ್ತೇಸರ ಲಕ್ಷ್ಮಣ ಅಮೀನ್ ಕೋಡಿಕಲ್, ಪ್ರಚಾರ ಸಮಿತಿಯ ಯಶವಂತ ಬೋಳೂರು, ಪ್ರಮುಖರಾದ ಶಿವಾನಂದ್, ಗಣೇಶ್ ಕುಲಾಲ್, ಉಷಾರಾಣಿ, ಶಶಿಧರ ಕೋಡಿಕಲ್, ಮಾಧವ ಸುವರ್ಣ, ಭರತ್ ಉಳ್ಳಾಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here