ಮಂಗಳೂರು(ನವದೆಹಲಿ): ಹಿಟ್ ಆ್ಯಂಡ್ ರನ್ ಕಾನೂನಿನ ಹೊಸ ರೂಲ್ಸ್ ಜಾರಿಗೆ ಮುಂದಾಗಿರುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಲಾರಿ ಓನರ್ಸ್ ಅಸೋಸಿಯೇಷನ್ ಜ.17ರ ಮಧ್ಯರಾತ್ರಿಯಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.
ಮುಷ್ಕರ ಹಿನ್ನೆಲೆಯಲ್ಲಿ 2 ಲಕ್ಷ ಲಾರಿಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಪೆಟ್ರೋಲ್, ಡೀಸೆಲ್ ಮತ್ತಿತರ ಪದಾರ್ಥಗಳಿಗೆ ಅಭಾವ ಉಂಟಾಗುವ ಸಾಧ್ಯತೆಯಿದೆ. ಹಿಟ್ ಆ್ಯಂಡ್ ರನ್ ಕಾನೂನು ವಿರೋಧಿಸಿ ಮತ್ತು ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಕ್ಷಿಣ ಭಾರತದ ಲಾರಿ ಮಾಲೀಕರ ಸಂಘಗಳು ಮುಷ್ಕರಕ್ಕೆ ಕರೆಕೊಟ್ಟಿವೆ. ಕರ್ನಾಟಕ ಲಾರಿ ಮಾಲೀಕರ ಸಂಘದಿಂದಲೂ ಮುಷ್ಕರಕ್ಕೆ ಬೆಂಬಲ ಸಿಕ್ಕಿದೆಯಾದರೂ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟ್ ಗಳ ಸಂಘ ಮುಷ್ಕರಕ್ಕೆ ಬೆಂಬಲ ನೀಡಿಲ್ಲ.