ಮಂಗಳೂರು(ಬೆಂಗಳೂರು): ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು ಮತ್ತು ವೈದ್ಯಕೀಯ ವೆಚ್ಚವನ್ನು 1 ಸಾವಿರದಿಂದ 1,500 ರೂ.ಗೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ರಾಜ್ಯದಲ್ಲಿ ಭವ್ಯವಾದ ಸುಸಜ್ಜಿತ ಸುವರ್ಣ ಪೊಲೀಸ್ ಭವನ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಬಜೆಟ್ ನಲ್ಲಿ ಹಣ ನಿಗದಿ ಮಾಡುತ್ತೇನೆ. ಸಿಇಎನ್ ಠಾಣಾಧಿಕಾರಿಗಳ ಹುದ್ದೆಯನ್ನು ಎಸಿಪಿ ಮತ್ತು ಡಿಸಿಪಿ ಮಟ್ಟಕ್ಕೆ ಉನ್ನತೀಕರಿಸಲಾಗುವುದು ಮತ್ತು ಬೆಂಗಳೂರು ನಗರದಲ್ಲಿ 8 ಹೆಚ್ಚುವರಿ ಡಿಸಿಪಿ ಹುದ್ದೆಗಳನ್ನು ಸೃಷ್ಟಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮಹತ್ವದ ಘೋಷಣೆಗಳನ್ನು ಮಾಡಿದರು.