ಪರೀಕ್ಷೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಗೆ ತರಗತಿಯಲ್ಲೇ ಹೃದಯಾಘಾತ-ಕೋಚಿಂಗ್ ಸೆಂಟರ್ ನಲ್ಲೆ ಕುಸಿದು ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿ ಮಾಧವ್ 

ಮಂಗಳೂರು(ಇಂದೋರ್): ಮಧ್ಯಪ್ರದೇಶದ ಇಂದೋರ್‌ನಲ್ಲಿ ಕೋಚಿಂಗ್ ಸೆಂಟರ್ ನಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಜ.17ರ ಸಂಜೆ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ನಗರದ ಭನ್ವಾರ್ಕುವಾನ್ ಪ್ರದೇಶದ ನಿವಾಸಿ ಮಾಧವ್ (18) ಎಂದು ಗುರುತಿಸಲಾಗಿದೆ. ಮಧ್ಯಪ್ರದೇಶ ಲೋಕಸೇವಾ ಆಯೋಗದ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುವ ಸಲುವಾಗಿ ನಗರದ ಹಲವೆಡೆ ಕೋಚಿಂಗ್ ನೀಡಲಾಗುತ್ತಿದೆ. ಅದರಂತೆ ಮಾಧವ್ ಕೋಚಿಂಗ್ ಸೆಂಟರ್‌ ನಲ್ಲಿ ತರಬೇತಿ ಪಡೆಯುತ್ತಿದ್ದ ಸಂದರ್ಭ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾನೆ. ಘಟನೆಯ ವಿಡಿಯೋ ತರಗತಿಯಲ್ಲಿ ಅಳವಡಿಸಿದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕುಸಿದು ಬಿದ್ದ ಯುವಕನನ್ನು ಗೆಳೆಯರು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಅಷ್ಟೋತ್ತಿಗಾಗಲೇ ಆತ ಕೊನೆಯುಸಿರು ಎಳೆದಿದ್ದ ಎನ್ನಲಾಗಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here