ಬೆಂಗಳೂರು: ಫೆ.12ರಿಂದ 23ರ ವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ವಿಧಾನಮಂಡಲ ಅಧಿವೇಶನದ ಮೊದಲ ದಿನವಾದ ಫೆ.12ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆ.16ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆಯಾಗಲಿದೆ.
ಲೋಕಸಭಾ ಚುನಾವಣೆಗೆ ಇನ್ನೂ ಕೆಲವೇ ತಿಂಗಳು ಇರುವುದರಿಂದ ನೀತಿಸಂಹಿತೆ ಮಾರ್ಚ್‌ನಿಂದಲೇ ಜಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಬಜೆಟನ್ನು ಫೆಬ್ರವರಿಯಲ್ಲಿ ಮಂಡಿಸಲು ಸರ್ಕಾರ ತೀರ್ಮಾನಿಸಿದೆ.