ಮಂಗಳೂರು (ಬಂಟ್ವಾಳ): ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಜ.18ರಂದು ಸಂಜೆ ವೇಳೆ ನಾವೂರ ಎಂಬಲ್ಲಿ ನಡೆದಿದೆ.
ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಮೃತಪಟ್ಟ ಬಾಲಕ. ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಸ್ಥಳೀಯ ಮುಳುಗು ತಜ್ಞರು ಬಾಲಕನನ್ನು ಮೇಲಕ್ಕೆ ಎತ್ತಿದ್ದು, ಅದಾಗಲೇ ಬಾಲಕನ ಪ್ರಾಣಪಕ್ಷಿ ಹಾರಿಹೋಗಿತ್ತು. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.