ಮಂಗಳೂರು/ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನಾ ಸಮಾರಂಭದ ಹಿನ್ನಲೆಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳು, ವಿಮಾ ಕಂಪನಿಗಳು, ಹಣಕಾಸು ಸಂಸ್ಥೆಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ ಜ. 22 ರಂದು ಅರ್ಧ ದಿನ ರಜೆ ಘೋಷಿಸಿದೆ.
ಎಲ್ಲಾ ಪಬ್ಲಿಕ್ ಸೆಕ್ಟರ್ ಬ್ಯಾಂಕ್ ಗಳು, ಜೀವವಿಮಾ ನಿಗಮ ಕಂಪನಿಗಳು, ಪಬ್ಲಿಕ್ ಸೆಕ್ಟರ್ ಹಣಕಾಸು ಸಂಸ್ಥೆಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು ಜನವರಿ 22ರಂದು ಮಧ್ಯಾಹ್ನ 2.30ರವರೆಗೆ ರಜೆ ಘೋಷಿಸಲಾಗಿದೆ ಎಂದು ಹಣಕಾಸು ಸಚಿವಾಲಯ ಪ್ರಕಟನೆಯಲ್ಲಿ ತಿಳಿಸಿದೆ.