ಮಂಗಳೂರು(ತುಮಕೂರು): ರಾಜ್ಯ ಸರಕಾರ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಹೆಚ್ಚುವರಿಯಾಗಿ 1,500 ರೂಪಾಯಿ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆ ಮಾಡುವ ಮೂಲಕ ರಾಜ್ಯ ಸರಕಾರ ತೆಂಗು ಬೆಳೆಗಾರರಿಗೆ ನೆರವಿನ ಹಸ್ತ ಚಾಚಿದೆ.
ತುಮಕೂರಿನ ಸಿದ್ದಗಂಗಾ ಮಠದ ಬಳಿ ಮಾದ್ಯಮದವರೊಂದಿಗೆ ಕುಣಿಗಲ್‌ನಲ್ಲಿ ಸ್ಟಡ್ ಫಾರಂನ ಟೌನ್‌ಶಿಪ್ ಮಾಡುವ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರೇಸ್‌ಕೋರ್ಸ್ ಕುಣಿಗಲ್‌ಗೆ ಶಿಫ್ಟ್ ಮಾಡಲು ಸಲಹೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಬೆಲೆ ಇಳಿಕೆಯಿಂದ ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ಕಳೆದ ಡಿಸೆಂಬರ್ ತಿಂಗಳಾಂತ್ಯದಲ್ಲಿ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು 300 ರೂಪಾಯಿ ಮತ್ತು ಉಂಡೆ ಕೊಬ್ಬರಿಗೆ 250 ರೂ ಹೆಚ್ಚಿಸಿ ಕೇಂದ್ರ ಸರಕಾರ ಆದೇಶಿಸಿತ್ತು. ಈಗ ರಾಜ್ಯ ಸರಕಾರ 1500ರೂ ಬೆಂಬಲ ಬೆಲೆ ಘೋಷಣೆ ಮಾಡುವ ಮೂಲಕ ಸಂಕಷ್ಟದಲ್ಲಿ ಸಿಲುಕಿದ್ದ ತೆಂಗು ಬೆಳೆಗಾರರ ನೆರವಿಗೆ ಮುಂದಾಗಿದೆ.