ಇಸ್ಪೀಟ್ ಅಡ್ಡೆಗೆ ಸಿಸಿಬಿ ಪೊಲೀಸರ ದಾಳಿ-29 ಮಂದಿ ಸೆರೆ-ಲಕ್ಷಕ್ಕೂ ಮಿಕ್ಕಿ ನಗದು ವಶಕ್ಕೆ

ಮಂಗಳೂರು: ಸಿಸಿಬಿ ಪೊಲೀಸರು ಇಸ್ಪೀಟ್ ಅಡ್ಡೆಯೊಂದಕ್ಕೆ ದಾಳಿ ನಡೆಸಿ ಜೂಜಾಟವಾಡುತ್ತಿದ್ದ 29 ಮಂದಿಯನ್ನು ಬಂಧಿಸಿ, ಒಟ್ಟು 1,75,450 ರೂ. ವಶಪಡಿಸಿಕೊಂಡಿದ್ದಾರೆ. ಮಂಗಳೂರು ತಾಲೂಕು ಕಿಲ್ಪಾಡಿ ಗ್ರಾಮದ ಬಂಡಸಾಲೆ ಎಂಬಲ್ಲಿ ಮನೆಯೊಂದರಲ್ಲಿ ಜೂಜಾಟ ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಆಧರಿಸಿ ಪೊಲೀಸರು ಬೆಳಗಿನ ಜಾವ ದಾಳಿ ನಡೆಸಿದ್ದರು.

ಸಾಂದರ್ಭಿಕ ಚಿತ್ರ

ನಿತ್ಯಾನಂದ, ವಿಲ್ಫ್ರೇಡ್ ಮತ್ತು ರೆಹಮಾನ್ ಎಂಬವರ ನೇತೃತ್ವದಲ್ಲಿ ಜೂಜಾಟ ನಡೆಯುತ್ತಿತ್ತೆಂದು ಆರೋಪಿಸಲಾಗಿದ್ದು, ನಿತ್ಯಾನಂದ ಮತ್ತು ರೆಹಮಾನ್ ತಲೆ ಮರೆಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here