ಮಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣಪ್ರತಿಷ್ಠೆಯ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಜ.22ರಂದು ಬಜಿಲಕೇರಿಯ ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು ಸೇವೆ ಸಲ್ಲಿಸಿದ್ದಾರೆ.
‘ಈ ಹಿಂದೆ ಮಂದಿರದ ವಿವಾದ ನ್ಯಾಯಾಲಯದಲ್ಲಿ ಇದ್ದ ವೇಳೆ ತೀರ್ಪು ಮಂದಿರದ ಪರವಾಗಿಯೇ ಬರಬೇಕು, ಅಲ್ಲಿಯೇ ಮಂದಿರ ನಿರ್ಮಾಣವಾಗಬೇಕು’ ಎಂದು ಹರಕೆ ಹೊತ್ತು ಬಜಿಲಕೇರಿಯ ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು ಸೇವೆಯ ಸಂಕಲ್ಪವನ್ನು ಕೈಗೊಂಡಿದ್ದೆ. ಕ್ಷೇತ್ರದ ಶಾಸಕನಾಗಿರುವ ಸಂದರ್ಭದಲ್ಲಿ ಇಂತಹ ಅಪೂರ್ವ ಘಳಿಗೆಗೆ ಸಾಕ್ಷಿಯಾಗಿರುವುದು ನನ್ನ ಜೀವಮಾನದ ಪರಮ ಪವಿತ್ರ ಭಾಗ್ಯ’ ಎಂದು ವೇದವ್ಯಾಸ ಕಾಮತ್ ಪ್ರತಿಕ್ರಿಯಿಸಿದ್ದಾರೆ.