ಅತ್ತಿಗೆ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ ಐವರು ಮೈದುನರು – ಪತಿಯೇ ಕೃತ್ಯದ ರೂವಾರಿ-ನಾಲ್ವರ ಬಂಧನ

ಮಂಗಳೂರು(ಲಕ್ನೋ): ಸ್ವಂತ ಪತ್ನಿಯನ್ನೇ ಪತಿ ತನ್ನ 5 ಜನ ಸಹೋದರರಿಗೆ ಹಣ ನೀಡಿ ಕೊಲೆ ಮಾಡಿಸಿರುವ ಘಟನೆ ಫತೇಪುರ್‌ನಲ್ಲಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳನ್ನು ರೋಹಿತ್ ಲೋಧಿ, ರಾಮಚಂದ್ರ ಆಲಿಯಾಸ್ ಪುಟ್ಟು, ಶಿವಂ ಅಲಿಯಾಸ್ ಪಂಚಮ್, ಸೋನು ಲೋಧಿ ಎಂದು ಗುರುತಿಸಲಾಗಿದೆ. ಐದನೇ ಆರೋಪಿಯಾದ ನೊಂಕು ಲೋಧಿ ಪರಾರಿಯಾಗಿದ್ದಾನೆ. ಸಂತ್ರಸ್ತೆಯ ಗಂಡ ದುಬೈನಲ್ಲಿದ್ದಾನೆ ಎಂದು ತಿಳಿದು ಬಂದಿದೆ. ತವರು ಮನೆಗೆ ಹೋಗಿದ್ದ ಆತ್ತಿಗೆಯನ್ನು ಜಾತ್ರೆಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳಿ ಆಕೆಯನ್ನು ನಂಬಿಸಿ ಮೈದುನರು ಕರೆ ತಂದಿದ್ದು, ಆಕೆಯ ಮೇಲೆ ಐದು ಜನ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ನಂತರ ಆಕೆಯ ಗುರುತನ್ನು ಮರೆಮಾಚಲು ಮುಖಕ್ಕೆ ಇಟ್ಟಿಗೆಗಳಿಂದ ಹೊಡೆದು ಹಲ್ಲೆ ಮಾಡಿ ಬಳಿಕ ಸಂತ್ರಸ್ತೆಯ ಮೃತದೇಹವನ್ನು ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರ ನೀರಿನ ಟ್ಯಾಂಕ್‌ನಲ್ಲಿ ಎಸೆದು ಹೋಗಿದ್ದರು.

LEAVE A REPLY

Please enter your comment!
Please enter your name here