ಹೃದಯಾಘಾತದಿಂದ ವೇದಿಕೆಯಲ್ಲೇ ಕುಸಿದು ಬಿದ್ದು ಹನುಮ ವೇಷಧಾರಿ ನಿಧನ

ಮಂಗಳೂರು(ಚಂಡೀಗಢ): ಹನುಮ ವೇಷಧಾರಿಯೊಬ್ಬರು ವೇದಿಕೆಯಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಹರಿಯಾಣದ ಭಿವಾನಿಯಲ್ಲಿ ನಡೆದಿದೆ. ಮೃತರನ್ನು ಎಂಜಿನಿಯರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಹರೀಶ್ ಮೆಹ್ತಾ ಎಂದು ಗುರುತಿಸಲಾಗಿದೆ.

ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ರಾಮಲೀಲಾ ಸ್ಕಿಟ್‌ ಹಮ್ಮಿಕೊಳ್ಳಲಾಗಿದ್ದು, ಪ್ರದರ್ಶನ ವೇಳೆ ಈ ದುರ್ಘಟನೆ ನಡೆದಿದೆ. ಕೂಡಲೇ ಸ್ಥಳೀಯರು ಮೆಹ್ತಾ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here