ಇಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಮಂಗಳೂರಿಗೆ

ಮಂಗಳೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ಮಂಗಳೂರು ಹೊರವಲಯದ ಅಡ್ಯಾರ್‌ ಗಾರ್ಡನ್ ನಲ್ಲಿ ಸಂಜೆ ನಡೆಯುವ ಎಸ್‌ ವೈ ಎಸ್‌ ಸಂಘಟನೆಯ 30ನೇ ವರ್ಷಾಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರಾತ್ರಿ 9 ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ರಾಜ್ಯಮಟ್ಟದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದ ಕುರಿತಾದ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಜ.25ರಂದು ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣದಿಂದ ಉಪ ಮುಖ್ಯಮಂತ್ರಿ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

LEAVE A REPLY

Please enter your comment!
Please enter your name here