ಮಂಗಳೂರು(ಮಡಿಕೇರಿ): ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ಎನ್ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ಮಡಿಕೇರಿಯ ಪುಣ್ಯ ಪೊನ್ನಮ್ಮ ಆಯ್ಕೆಯಾಗಿದ್ದಾರೆ.
ದೆಹಲಿಯಲ್ಲಿ ಜ.26ರಂದು ನಡೆಯುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪುಣ್ಯ ಪೊನ್ನಮ್ಮ ಅವರು ಎನ್ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗವನ್ನು ಮುನ್ನಡೆಸಲಿದ್ದಾರೆ. ಬೆಂಗಳೂರಿನ ಕ್ರೈಸ್ಟ್ ವಿವಿಯ ಕಾನೂನು ವಿದ್ಯಾರ್ಥಿನಿಯಾಗಿರುವ ಪುಣ್ಯ, ಮಡಿಕೇರಿ ಸರ್ಕಲ್ ಇನ್ಸ್ಪೆಕ್ಟರ್ ಅನೂಪ್ ಮಾದಪ್ಪ ಅವರ ಪುತ್ರಿಯಾಗಿದ್ದಾರೆ.