ಮಂಗಳೂರು(ನವದೆಹಲಿ): ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ದೆಹಲಿಯ ಬಿಜೆಪಿ ಕಚೇರಿಯಲ್ಲಿ ಶೆಟ್ಟರ್ ಅವರು ಕೇಂದ್ರ ಸಚಿವರಾದ ಭೂಪೇಂದರ್ ಯಾದವ್, ರಾಜೀವ್ ಚಂದ್ರಶೇಖರ್, ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ಮತ್ತೆ ಬಿಜೆಪಿಗೆ ಸೇರ್ಪಡೆಯಾದರು. ಅಲ್ಲದೆ, ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿದುಬಂದಿದೆ. ಕಳೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
https://twitter.com/i/broadcasts/1OwxWYbppdkGQ