ಧರ್ಮಪುರಿಯಲ್ಲಿ ಭೀಕರ ಅಪಘಾತ-ಎರಡು ಟ್ರಕ್​ಗಳು ನಡುವೆ ಸಿಲುಕಿದ ಕಾರು-8 ಮಂದಿ ದುರ್ಮರಣ-5ಕ್ಕೂ ಹೆಚ್ಚು ಮಂದಿಗೆ ಗಾಯ-ಸೇತುವೆಯಿಂದ ಉರುಳಿ ಬಿದ್ದ ಟ್ರಕ್

ಮಂಗಳೂರು(ಚೆನ್ನೈ): ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಐದಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತೋಪ್ಪುರ್​ ಘಾಟ್​ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅತಿ ವೇಗದಲ್ಲಿ ಬಂದ ಟ್ರಕ್ ನಿಯಂತ್ರಣ ಕಳೆದುಕೊಂಡು​ ಮತ್ತೊಂದು ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಎರಡು ಟ್ರಕ್​ಗಳ ನಡುವೆ ಸಿಲುಕಿಕೊಂಡ ಕಾರೊಂದು ನಜ್ಜುಗುಜ್ಜಾಗಿದೆ. ಒಟ್ಟು ನಾಲ್ಕು ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ಮೂರು ವಾಹನಗಳಿಗೆ ಬೆಂಕಿ ಹತ್ತಿಕೊಂಡಿದೆ.

ಡಿಕ್ಕಿಯ ರಭಸಕ್ಕೆ ಕಾರು ಸ್ಥಳದಲ್ಲೇ ನಜ್ಜುಗುಜ್ಜಾಗಿದ್ದು, ಟ್ರಕ್ ರೈಲಿಂಗ್‌ಗೆ ಡಿಕ್ಕಿ ಹೊಡೆದು ಸೇತುವೆಯಿಂದ ಕೆಳಗೆ ಬಿದ್ದಿದೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ತಕ್ಷಣ ಆರ್ಥಿಕ ನೆರವು ಘೋಷಿಸಿದ್ದಾರೆ. ಮೃತರ ಕುಟುಂಬಕ್ಕೆ 2 ಲಕ್ಷ ಹಾಗೂ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರಿಗೆ 50,000 ಪರಿಹಾರ ಘೋಷಿಸಲಾಗಿದೆ. ಅಗ್ನಿಶಾಮಕ ದಳ ಮತ್ತು ಇತರ ತುರ್ತು ಸೇವೆಗಳು ಘಟನಾ ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಇಂತಹ ಅಪಘಾತಗಳನ್ನು ತಡೆಯಲು ಎಲಿವೇಟೆಡ್ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಧರ್ಮಪುರಿ ಸಂಸದ ಮತ್ತು ಡಿಎಂಕೆ ಮುಖಂಡರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here