



ಮಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ ನಡೆಯಿತು.







ಮಂಗಳೂರು ಆಡಳಿತ ಸೌಧದ ಬಳಿ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಭವ್ಯ, ಗೌರವಾಧ್ಯಕ್ಷ ಪದ್ಮಾವತಿ ಶೆಟ್ಟಿ, ಸಿಐಟಿಯು ಜಿಲ್ಲಾಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ, ಸಿಐಟಿಯು ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಗಿರಿಜಾ, ರತ್ನಮಾಲ ಸೇರಿದಂತೆ ಹಲವರು ಭಾಗವಹಿಸಿದ್ದರು. ಬಳಿಕ ಸಿಐಟಿಯು ನ ನಿಯೋಗ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಕಚೇರಿಗೆ ತೆರಳಿ ಮನವಿಯನ್ನು ಸಲ್ಲಿಸಿತು. ದೇಶ ಉಳಿಸಿ,ಜನತೆಯ ಬದುಕನ್ನು ರಕ್ಷಿಸಿ ಎಂಬ ಘೋಷಣೆಯೊಂದಿಗೆ ಕಾರ್ಮಿಕ ವರ್ಗದ ನೇತ್ರತ್ವದಲ್ಲಿ ಜನವರಿ 12ರಿಂದ ಫೆಬ್ರವರಿ 16ರವರೆಗೆ ದೇಶಾದ್ಯಂತ ಪ್ರಚಾರಾಂದೋಲನ ನಡೆಯಲಿದ್ದು,ಅದರ ಭಾಗವಾಗಿ ಕಳೆದ 3 ದಿನಗಳಿಂದ ದೇಶದ ಎಲ್ಲಾ ಸಂಸದರ ಕಚೇರಿಯೆದುರು ಪ್ರತಿಭಟನೆ ನಡೆಯುತ್ತಿದೆ.














