ಮಂಗಳೂರು(ಹೊಸದಿಲ್ಲಿ): ಜ.27ರ ಮಧ್ಯರಾತ್ರಿ ದೆಹಲಿಯ ಕಲ್ಕಾಜಿ ಮಂದಿರದಲ್ಲಿ ನಡೆದ ಮಾತಾ ಜಾಗರಣ ಸಮಾರಂಭದಲ್ಲಿ ವೇದಿಕೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿದ್ದಾರೆ.
ಸುಮಾರು 1500-1600 ಜನರು ಕಾರ್ಯಕ್ರಮದಲ್ಲಿ ಸೇರಿದ್ದು, ಕಾರ್ಯಕ್ರಮ ನಡೆಸಲು ಅನುಮತಿ ನೀಡಲಾಗಿರಲಿಲ್ಲ, ಆದರೆ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಕಷ್ಟು ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಘಟಕರ ವಿರುದ್ಧ ಐಪಿಸಿ ಸೆಕ್ಷನ್ 337, 304A ಮತ್ತು 188 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಮುಖ್ಯ ವೇದಿಕೆಯ ಬಳಿ ಸಂಘಟಕರು ಮತ್ತು ವಿಐಪಿಗಳ ಕುಟುಂಬಗಳು ಕುಳಿತುಕೊಳ್ಳಲು ಒಂದು ಎತ್ತರದ ವೇದಿಕೆಯನ್ನು ನಿರ್ಮಿಸಲಾಗಿತ್ತು. ಮಧ್ಯರಾತ್ರಿ 12.30ರ ಸುಮಾರಿಗೆ ಈ ವೇದಿಕೆಯ ಮೇಲಿದ್ದ ಜನರ ಭಾರವನ್ನು ತಾಳಲಾರದೆ ವೇದಿಕೆ ಕೆಳಕ್ಕೆ ಕುಸಿದಿದೆ. ಇದರಿಂದ ವೇದಿಕೆಯ ಕೆಳಗೆ ಕುಳಿತಿದ್ದ ಕೆಲವರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಲಾ ಗಾಯಾಳುಗಳನ್ನು ನಗರದ ಏಮ್ಸ್ ಟ್ರಾಮಾ ಸೆಂಟರ್, ಸಫ್ದರ್ಜಂಗ್ ಆಸ್ಪತ್ರೆ ಮತ್ತು ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
STORY | 1 dead, 17 injured as stage collapses at Delhi's Kalkaji temple
READ: https://t.co/DIBWXKyDTG
VIDEO:
(Full video available on PTI Videos – https://t.co/n147TvqRQz) pic.twitter.com/bo1fm3immb
— Press Trust of India (@PTI_News) January 28, 2024