ಮಂಗಳೂರು: ಕರಾವಳಿ ಭಾಗದ ಕೃಷಿಕರ ಪ್ರಮುಖ ಮನೋರಂಜನಾ ಕ್ರೀಡೆಗಳಲ್ಲಿ ಒಂದಾಗಿರುವ ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಳಿ ಅಂಕವನ್ನು ನಡೆಸಲು ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶ ಇಲ್ಲ. ಆದ್ದರಿಂದ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು. ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಪ್ರಕಟಣೆ ಹೊರಡಿಸಿದ್ದಾರೆ. ಕೆಲ ದಿನಗಳ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ ಮಂಗಳೂರಿನಲ್ಲಿ ನಡೆದ ಜಿಲ್ಲಾ ಕೆಡಿಪಿ ಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕೋಳಿ ಅಂಕಕ್ಕೆ ಅನುಮತಿ ನೀಡುವಂತೆ ಸಭೆಯಲ್ಲಿ ಆಗ್ರಹಿಸಿದ್ದರು.