ಫೆ.17ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ-ಡಿ.ಕೆ ಶಿವಕುಮಾರ್ ಮಾಹಿತಿ

ಮಂಗಳೂರು(ಬೆಂಗಳೂರು): ಫೆ.17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಕಳೆದ ತಿಂಗಳಲ್ಲೆ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಆದರೆ ಕಾರಾಣಾಂತರದಿಂದ ಅದನ್ನು ಮುಂದೂಡಲಾಗಿತ್ತು. ಪ್ರಸ್ತುತ ಫೆ.17ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here